ಬೆಂಗಳೂರು : ಕ್ರಿಕೆಟ್ ಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕ್ರೀಡೆಗೆ ಹೆಚ್ಚಿನ ಒತ್ತು ನೀಡಲು ಉದ್ಯಾನನಗರಿ ಬೆಂಗಳೂರಿನಲ್ಲಿ ಇನ್ನೊಂದು ಬೃಹತ್ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗಲಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅವಘಡ ಸಂಭವಿಸಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಈ ಮಹತ್ವದ ಹೆಜ್ಜೆ ಇಟ್ಟಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಅಧಿಕೃತಗೊಳಿಸಿದ್ದಾರೆ. ಬೊಮ್ಮಸಂದ್ರದ ಸೂರ್ಯಸಿಟಿಯಲ್ಲಿ ಬೃಹತ್ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
1,650 ಕೋಟಿ ರೂಪಾಯಿ ವೆಚ್ಚದಲ್ಲಿ 75 ಎಕರೆಯಲ್ಲಿ 60,000 ಆಸನಗಳ ಸಾಮರ್ಥ್ಯವುಳ್ಳ ಬೃಹತ್ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣವಾಗಲಿದ್ದು, ಇದು ರಾಜ್ಯದ ಅತಿ ದೊಡ್ಡ ಸ್ಟೇಡಿಯಂ ಎಂದು ಕರೆಸಿಕೊಳ್ಳಲಿದೆ. ಈ ಬೃಹತ್ ಕ್ರೀಡಾ ಸಂಕೀರ್ಣದಲ್ಲಿ ಒಳಾಂಗಣ, ಹೊರಾಂಗಣ ಕ್ರೀಡಾಂಗಣಗಳು, ಅತ್ಯಾಧುನಿಕ ಜಿಮ್, ತರಬೇತಿ ಕೌಶಲ್ಯಗಳು, ಒಲಿಂಪಿಕ್ ಗಾತ್ರದ ಈಜು ಕೊಳಗಳು, ಅತಿಥಿ ಗೃಹಗಳು, ಹಾಸ್ಟೆಲ್‌ಗಳು, ಹೋಟೆಲ್‌ಗಳು, ಕನ್ವೆನ್ಷನ್ ಹಾಲ್ ಅನ್ನು ಒಳಂಗೊಂಡಿರಲಿದೆ.



















