ಬೆಂಗಳೂರು: ಕೆಲವೇ ದಿನಗಳಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದೆ. ಹೌದು, ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ದಿನದಂದು ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಬಹುದಾಗಿದೆ.
ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಈಗ ಬಿಎಂಟಿಸಿಯು ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಆಫರ್ ನೀಡಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿದರೂ ಸಾಕು, ಉಚಿತವಾಗಿ ಸಂಚರಿಸಬಹುದಾಗಿದೆ.
ಬಿಎಂಟಿಸಿಯ ವೋಲ್ವೋ ಬಸ್ ಗಳನ್ನು ಹೊರತುಪಡಿಸಿ ಎಲ್ಲ ಬಸ್ ಗಳಲ್ಲೂ ವಿದ್ಯಾರ್ಥಿಗಳು ಉಚಿತವಾಗಿ ಸಂಚರಿಸಬಹುದಾಗಿದೆ. ಗ್ಯಾರಂಟಿ ಯೋಜನೆಯಿಂದಾಗಿ ವಿದ್ಯಾರ್ಥಿನಿಯರು ಈಗಾಗಲೇ ಉಚಿತವಾಗಿ ಸಂಚರಿಸುತ್ತಿದ್ದಾರೆ. ಈಗ ಬಿಎಂಟಿಸಿ ನಿರ್ಧಾರದಿಂದ ವಿದ್ಯಾರ್ಥಿಗಳು ಕೂಡ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳ ಬಳಿಯೇ ಸ್ಟಾಪ್ ನೀಡುವಂತೆ ಬಿಎಂಟಿಸಿ ಚಾಲಕರು ಹಾಗೂ ನಿರ್ವಾಹಕರಿಗೆ ಸೂಚಿಸಲಾಗಿದೆ.