ಬೆಂಗಳೂರು: ಪದವಿ ಮುಗಿಸಿ, ಬ್ಯಾಂಕಿನಲ್ಲಿ ಕೆಲಸ ಮಾಡಬೇಕು ಎಂದು ಬಯಸುವವರಿಗೆ ಸುವರ್ಣಾವಕಾಶದ ಬಾಗಿಲೊಂದು ತೆರೆದಿದೆ. ಹೌದು, ಇಂಡಿಯನ್ ಬ್ಯಾಂಕ್ ನಲ್ಲಿರುವ ಖಾಲಿ ಇರುವ 1,500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಗಸ್ಟ್ 7 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಹಾಗಾಗಿ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಇಂಡಿಯನ್ ಬ್ಯಾಂಕ್
ಒಟ್ಟು ಹುದ್ದೆ: 1,500
ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 7
ಉದ್ಯೋಗ ಸ್ಥಳ: ದೇಶಾದ್ಯಂತ
ನೇಮಕಾತಿ ಮಾಡಿಕೊಳ್ಳುತ್ತಿರುವ ಎಲ್ಲ ಹುದ್ದೆಗಳೂ ಅಪ್ರೆಂಟಿಸ್ ಹುದ್ದೆಗಳಾಗಿವೆ. ಮಾನ್ಯತೆ ಪಡೆದ ಯಾವುವೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 12-15 ಸಾವಿರ ರೂಪಾಯಿ ವೇತನ ನೀಡಲಾಗುತ್ತದೆ. ಆನ್ ಲೈನ್ ಪರೀಕ್ಷೆ, ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ವಯೋಮಿತಿ ವಿನಾಯಿತಿ ನೀಡಲಾಗಿದೆ. ಹಾಗೆಯೇ, ಒಬಿಸಿಯವರಿಗೆ ಮೂರು ವರ್ಷಗಳ ವಿನಾಯಿತಿ ಇದೆ. ಎಸ್ಸಿ, ಎಸ್ಟಿ, ಇಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 175 ರೂಪಾಯಿ ಅರ್ಜಿ ಶುಲ್ಕವಿದೆ. ಜನರಲ್ ಹಾಗೂ ಒಬಿಸಿಯವರಿಗೆ 800 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು https://www.indianbank.in ವೆಬ್ ಸೈಟ್ ಗೆ ಭೇಟಿ ನೀಡಿ, ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.



















