ಬೆಂಗಳೂರು: ಕೇಂದ್ರ ಸರ್ಕಾರದ ಹುದ್ದೆ ಗಳಿಸಬೇಕು ಎಂದು ತಯಾರಿ ನಡೆಸುತ್ತಿರುವವರಿಗೆ ಶುಭ ಸುದ್ದಿಯೊಂದು ಸಿಕ್ಕಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL Artisan Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 515 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 29 ಸಾವಿರ ರೂಪಾಯಿಯಿಂದ 65 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮಾಡಿಕೊಳ್ಳುವ ಮೂಲಕ ನೇಮಕಾತಿ ಆದೇಶ ಹೊರಡಿಸಲಾಗುತ್ತದೆ. ಜುಲೈ 16ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುತ್ತದೆ ಎಂಬುದಾಗಿ ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ.
ಯಾವ ಹುದ್ದೆ ಎಷ್ಟು ಖಾಲಿ?
ಫಿಟ್ಟರ್- 176
ವೆಲ್ಡರ್- 97
ಟರ್ನರ್ – 51
ಎಲೆಕ್ಟ್ರಿಶಿಯನ್- 65
ಮಷಿನಿಸ್ಟ್- 104
ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್- 18
ಫೌಂಡ್ರಿಮ್ಯಾನ್- 04
https://careers.bhel.in/index.jsp ವೆಬ್ ಸೈಟಿಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಎಸ್ಸೆಸ್ಸೆಲ್ಸಿ, ಐಟಿಐ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕನಿಷ್ಠ 27 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಒಬಿಸಿಯವರಿಗೆ ಮೂರು ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ ಇದೆ.