ಬೆಂಗಳೂರು: ಕನ್ನಡಿಗ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ.
ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಿದ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸಿವಿಲ್ ಸೇವೆಗಳ ಹುದ್ದೆಗಳಲ್ಲಿ ಶೇ.2ರಷ್ಟು ಮಂಜೂರಾದ ಮೀಸಲಾತಿಯನ್ನು ವೃಂದಬಲದಲ್ಲಿ ನಿಗದಿಪಡಿಸುವ ಕುರಿತು ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಮಾತನಾಡಿ, ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಶೇ. 3ರಷ್ಟು ಮತ್ತು ಇನ್ನಿತರ ಇಲಾಖೆಗಳಲ್ಲಿ ಶೇ. 2ರಷ್ಟು ಮೀಸಲಾತಿ ನೀಡುವ ಕರಡು ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರದಲ್ಲೇ ಅಂತಿಮ ಅಧಿಸೂಚನೆ ಹೊರಡಿಸುವುದಾಗಿ ಹೇಳಿದ್ದಾರೆ.
2016-17 ರಲ್ಲಿ ಮೊದಲ ಬಾರಿಗೆ ಸರ್ಕಾರಿ ಉದ್ಯೋಗ ನೀಡುವ ಪ್ರಸ್ತಾಪವನ್ನು ಮುಂದಿಡಲಾಗಿತ್ತು. ಅದು ಆಗಿರಲಿಲ್ಲ. ಈಗ ನಾವು ಜಾರಿ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಕ್ರೀಡಾಪಟುಗಳಿಗೆ ಎ ಮತ್ತು ಬಿ ಗುಂಪುಗಳಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸಲಾಗಿದ್ದು, ಪೂರ್ವ ವಿಶ್ವವಿದ್ಯಾಲಯದಲ್ಲಿ ಉತ್ತೀರ್ಣರಾದವರಿಗೆ ಸಿ ಮತ್ತು ಡಿ ಗುಂಪುಗಳಲ್ಲಿ ಉದ್ಯೋಗಾವಕಾಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.