ಧರ್ಮಸ್ಥಳದ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಅ. 15ರಿಂದ ಅ. 24ರ ವರೆಗೆ 10 ದಿನಗಳ ಕಾಲ ಸ್ವ- ಉದ್ಯೋಗ ಆಕಾಂಕ್ಷಿಗಳಿಗೆ ಹಪ್ಪಳ, ಉಪ್ಪಿನಕಾಯಿ, ಮಸಾಲ ಪೌಡರ್ ತಯಾರಿಕೆಯ ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ.
ಇಲ್ಲಿ 18 ರಿಂದ 45 ವರ್ಷದೊಳಗಿನವರು ತರಬೇತಿ ಪಡೆಯಬಹುದು. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಉಚಿತವಾಗಿರುತ್ತದೆ. ಮನೆ ಸಮೀಪವಿರುವವರು ದಿನಾಲೂ ಹೋಗಿ ಬರಲು ಅವಕಾಶವಿರುತ್ತದೆ. ಅಲ್ಲದೇ, ಸಂಸ್ಥೆಯ ಸಮವಸ್ತ್ರವನ್ನು ಕೂಡ ಉಚಿತವಾಗಿ ನೀಡಲಾಗುತ್ತಿದೆ. ತರಬೇತಿಯ ನಂತರ ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆಸಕ್ತರು 6364561982ಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದೆಂದು ಉಜಿರೆಯ ರುಡ್ಸೆಟ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.