ಬೆಂಗಳೂರು: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಫೈನಲ್ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಸಿಹಿ ಸುದ್ದಿ ಬಂದಿದೆ. ಭುಜದ ಗಾಯದ ಸಮಸ್ಯೆ ಎದುರಿಸುತ್ತಿರುವ ನ್ಯೂಜಿಲೆಂಡ್ ವೇಗದ ಬೌಲರ್ ಮ್ಯಾಟ್ ಹೆನ್ರಿ ಅವರು ಟೀಮ್ ಇಂಡಿಯಾ ವಿರುದ್ಧದ ಫೈನಲ್ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆಯಿದೆ.
ಆದರೆ, ಗ್ಯಾರಿ ಸ್ಟೀಡ್ ಫೈನಲ್ ಪಂದ್ಯಕ್ಕೆ ಪಂದ್ಯಕ್ಕೆ ಚೇತರಿಸಿಕೊಳ್ಳುವ ಭರವಸೆ ವ್ಯಕ್ತಪಡಿಸಿದ್ದಾರೆ. ಭಾರತ ವಿರುದ್ಧದ ಗ್ರೂಪ್ ಪಂದ್ಯದಲ್ಲಿ 5 ವಿಕೆಟ್ ಸಾಧನೆ ಸೇರಿದಂತೆ ಟೂರ್ನಿಯಲ್ಲಿ ಹೆನ್ರಿ ಈವರೆಗೆ 10 ವಿಕೆಟ್ ಉರುಳಿಸಿ ಅಗ್ರಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ಲಾಹೋರ್ನಲ್ಲಿ ಮಾರ್ಚ್ 5ರ ಬುಧವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್ ಪಂದ್ಯದ ವೇಳೆ 33 ವರ್ಷದ ಹೆನ್ರಿ ಗಾಯಗೊಂಡಿದ್ದರು. ಮ್ಯಾಟ್ ಅವರ ಭುಜದ ಗಾಯಕ್ಕೆ ತುತ್ತಾಗಿದ್ದು, ಚೇತರಿಕೊಳ್ಳುತ್ತಿದ್ದಾರೆ ಎಂದು ಸ್ಟೀಡ್ ಶುಕ್ರವಾರ (ಮಾ 7) ಸುದ್ದಿಗಾರರಿಗೆ ತಿಳಿಸಿದ್ದಾರೆ.
ಸ್ಕ್ಯಾನ್ಗೆ ಒಳಗಾಗಿರುವ ಹೆನ್ರಿ, ಪಂದ್ಯಕ್ಕೆ ಫಿಟ್ ಆಗುತ್ತಾರೆ ಎಂದು ಆಶಿಸುತ್ತೇವೆ ಎಂದು ಹೇಳಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಸೆಮಿಫೈನಲ್ನಲ್ಲಿ ವೇಗದ ಬೌಲರ್ ಮ್ಯಾಟ್ ಹೆನ್ರಿ, ಎರಡು ವಿಕೆಟ್ ಪಡೆದಿದ್ದರು. ಆದರೆ, ಫೀಲ್ಡಿಂಗ್ ಮಾಡುವ ವೇಳೆ ಬಿದ್ದು ಗಾಯಗೊಂಡಿದ್ದರು. ಏಳು ಓವರ್ಗಳಲ್ಲಿ 43 ರನ್ ನೀಡಿ 2 ವಿಕೆಟ್ ಕಬಳಿಸಿದ್ದ ಹೆನ್ರಿ ಟೂರ್ನಿಯ ಕೊನೆಯ ಲೀಗ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಬೌಲಿಂಗ್ ಮಾಡಿದ್ದರು. ಅವರು 5 ವಿಕೆಟ್ ಉರುಳಿಸಿ ಮಿಂಚಿದ್ದರು. ವೇಗಿಯಾಗಿದ್ದರೂ ದುಬೈನ ನಿಧಾನಗತಿಯ ಪಿಚ್ನಲ್ಲಿ ಪ್ರಮುಖ 5 ವಿಕೆಟ್ ಉರುಳಿಸಿ ಅದ್ಭುತ ಪ್ರದರ್ಶನ ನೀಡಿದ್ದರು. ಹೀಗಾಗಿ ಭಾರತ ತಂಡಕ್ಕೆ ಅವರು ಇಲ್ಲದೇ ಇರುವುದು ದೊಡ್ಡ ಸಮಾಧಾನ.
ಬದಲಿಗೆ ನಾಥನ್ ಸ್ಮಿತ್ ತಂಡವನ್ನು ಸೇರ್ಪಡೆಯಾಗಬಹುದು. ಇಲ್ಲವಾದಲ್ಲಿ ಹೆಚ್ಚುವರಿ ಸ್ಪಿನ್ನರ್ ಬೇಕೆಂದರೆ ಇಶ್ ಸೋಧಿ ಅವರಿಗೆ ಮಣೆ ಹಾಕಬಹುದು.
ಪ್ರಸಕ್ತ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿರುವ ಹೆನ್ರಿ ಅವರು ಬುಧವಾರ ಬಿಡುಗಡೆಗೊಂಡ ಐಸಿಸಿ ಶ್ರೇಯಾಂಕದ ಬೌಲರ್ಗಳ ಪಟ್ಟಿಯಲ್ಲಿ 3 ಸ್ಥಾನ ಮೇಲೇರಿ 3ನೇ ಸ್ಥಾನಕ್ಕೆ ಏರಿದ್ದಾರೆ. ತಮಗೆ ಕಂಟಕವಾಗಿದ್ದ ಹೆನ್ರಿ ಗಾಯಗೊಂಡಿರುವುದು ಭಾರತ ತಂಡದ ಪಾಲಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ.
ನ್ಯೂಜಿಲೆಂಡ್ ಸಂಭಾವ್ಯ 11
ಡೆವೊನ್ ಕಾನ್ವೆ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಟಾಮ್ ಲಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ನಾಥನ್ ಸ್ಮಿತ್ (ಹೆನ್ರಿ ಗಾಯಗೊಂಡರೆ), ಕೈಲ್ ಜೇಮಿಸನ್, ವಿಲಿಯಂ ಒರೂರ್ಕೆ.
ನ್ಯೂಜಿಲೆಂಡ್ ಕ್ರಿಕೆಟ್ ತಂಡ
ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೆ, ಕೈಲ್ ಜೇಮಿಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡ್ಯಾರಿಲ್ ಮಿಚೆಲ್, ವಿಲ್ ಒರೂರ್ಕ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ನಾಥನ್ ಸ್ಮಿತ್, ಕೇನ್ ವಿಲಿಯಮ್ಸನ್, ವಿಲ್ ಯಂಗ್, ಜಾಕೋಬ್ ಡಫಿ.