ಬೆಂಗಳೂರು: ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹಾನಗರ ಸಾರಿಗೆ ಸಂಸ್ಥೆಯಿಂದ ಗುಡ್ ನ್ಯೂಸ್ ವೊಂದು ಸಿಕ್ಕಿದೆ.
2024-25ನೇ ಸಾಲಿನ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಪಿಯುಸಿ ವಿದ್ಯಾರ್ಥಿಗಳಿಗೆ ಮಾರ್ಚ್ 1 ರಿಂದ 20ರ ವರೆಗೆ ಪರೀಕ್ಷೆಗಳು ನಡೆಯುತ್ತವೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾರ್ಚ್ 21ರಿಂದ ಏಪ್ರಿಲ್ 4ರ ವರೆಗೆ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಸಾರಿಗೆ ಬಸ್ ನಲ್ಲಿ ಉಚಿತವಾಗಿ ಸಂಚರಿಸಬಹುದು. ಪರೀಕ್ಷಾ ಕೇಂದ್ರಕ್ಕೆ ತೆರಳುವ ವಿದ್ಯಾರ್ಥಿಗಳು ಪರೀಕ್ಷಾ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷೆ ಇರುವ ನಿಗದಿತ ದಿನಾಂಕದಂದು ಮಾತ್ರ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣ ಮಾಡಬಹುದು ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.