ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಶೀಘ್ರದಲ್ಲೇ ನೀಲಿ ಮಾರ್ಗದ ನಮ್ಮ ಮೆಟ್ರೋ ಸಂಚಾರ ಆರಂಭವಾಗಲಿದೆ. ಈಗಾಗಲೇ ಈ ಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ಯಶಸ್ವಿಯಾದ ಹಿನ್ನೆಲೆಯಲ್ಲಿ ಬಿಎಂಆರ್ಸಿಎಲ್ ಮಹತ್ವದ ಹೆಜ್ಜೆ ಇಟ್ಟಿದೆ.
ಮುಂಬರುವ 2027ರ ಮೇ ಅಂತ್ಯದ ವೇಳೆಗೆ ವಾಣಿಜ್ಯ ಸಂಚಾರ ಆರಂಭವಾಗಲಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್ನಿಂದ ಕೆ.ಆರ್. ಪುರಂ ವರೆಗಿನ ಒಟ್ಟು 19.75 ಕಿಲೋ ಮೀಟರ್ ಉದ್ದದ ಮಾರ್ಗ ಇದಾಗಿದೆ. ಈಗಾಗಲೇ ಈ ಲೈನ್ ನಲ್ಲಿ 3.4 ಕಿಲೋ ಮೀಟರ್ ವರೆಗೆ ಪ್ರಾಥಮಿಕ ಸಂಚಾರ ನಡೆಸಲಾಗಿದೆ. ಇನ್ನು ನವೆಂಬರ್ 15ರ ಒಳಗಾಗಿ ಪೂರ್ಣ ಪ್ರಮಾಣದ ಪ್ರಾಯೋಗಿಕ ಸಂಚಾರವೂ ನಡೆಯಲಿದೆ.


















