ಬೆಂಗಳೂರು: ರಾಜ್ಯ ಸರ್ಕಾರ ಕ್ಯಾನ್ಸರ್ ಪೀಡಿತ ರೋಗಿಗಳ (cancer patients) ಚಿಕಿತ್ಸೆ ವಿಚಾರದಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ (Chemotherapy) ಆರಂಭವಾಗಲಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (dinesh gundu rao) ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಆಸ್ಪತ್ರೆಗಳಲ್ಲೂ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯಬಹುದು. ಪ್ರತಿ ವರ್ಷ ಹೊಸದಾಗಿ 70 ಸಾವಿರ ಕ್ಯಾನ್ಸರ್ ಪ್ರಕರಣ ದಾಖಲಾಗುತ್ತಿದೆ. ಕಡಿಮೆ ವೆಚ್ಚದಲ್ಲಿ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯಬೇಕು ಅಂದರೆ ಬೆಂಗಳೂರಿನ ಕಿದ್ವಾಯಿ ಅಂತಹ ಸಂಸ್ಥೆಗಳಿಗೆ ಬರಬೇಕು. ಹೀಗಾಗಿ ಬಡವರಿಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಓಪನ್ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಆಪ್ತ ಸಮಾಲೋಚನೆ, ಮೆಡಿಕಲ್ ಅಂಕಾಲಜಿಸ್ಟ್, ವೈದ್ಯರು ಹಾಗೂ ಫಾರ್ಮಾಸಿ ಅಧಿಕಾರಿಗಳು ಕಿಮೋಥೆರಪಿ ಕೇಂದ್ರಗಳಲ್ಲಿ ಇರುತ್ತಾರೆ. ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಉದ್ಘಾಟನೆ ಮಾಡಲಿದ್ದಾರೆ. ಕ್ಯಾನ್ಸರ್ ಪತ್ತೆಯಾಗಿದೆ ಅನ್ನುವವರು ಕೀಮೋ ಥೆರಪಿ ಪಡೆಯಬಹುದು. ಎಲ್ಲಾ ರೀತಿಯ ಟ್ರೈನಿಂಗ್ಗಳನ್ನು ಮಾಡಲಾಗಿದೆ. ಮೆಡಿಕಲ್ ಅಂಕಾಲಜಿಸ್ಟ್ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದಿದ್ದಾರೆ.
ಪ್ರತಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗಾಗಿ 10 ಬೆಡ್ ಮೀಸಲು ಇಡುತ್ತೇವೆ. ಅದಕ್ಕೆ ಇಬ್ಬರು ನರ್ಸ್ ಗಳು ಇರುತ್ತಾರೆ ಎಂದಿದ್ದಾರೆ.