ಬೆಂಗಳೂರು : ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ನಾನಾ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆ ವಿಶೇಷ ಹಾಗೂ ಹೆಚ್ಚುವರಿ ಬಸ್ಗಳ ಕಾರ್ಯಾಚರಣೆಗೆ ನಿರ್ಧರಿಸಿದೆ. ಹಬ್ಬದ ಸಮಯದಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ಇರುವ ಹಿನ್ನೆಲೆ 2,400ಕ್ಕೂ ಹೆಚ್ಚು ಬಸ್ಗಳನ್ನು ಕಾರ್ಯಾಚರಣೆಗಿಳಿಸಲು ಯೋಜನೆ ರೂಪಿಸಲಾಗಿದೆ.
ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಿಂದ ಹುಬ್ಬಳ್ಳಿ-ಧಾರವಾಡ, ಮಂಗಳೂರು, ಬೀದರ್, ಬೆಳಗಾವಿ, ಗದಗ ಸೇರಿದಂತೆ ಹಲವು ಜಿಲ್ಲೆಗಳಿಗೆ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗುತ್ತದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ರಾಜ್ಯದ ವಿವಿಧ ಭಾಗಗಳಿಗೆ ಹಾಗೂ ಶಾಂತಿನಗರ ಬಸ್ ನಿಲ್ದಾಣದಿಂದ ಹೊರ ರಾಜ್ಯಗಳಿಗೆ ಹೆಚ್ಚುವರಿ ಬಸ್ಗಳು ಸಂಚರಿಸಲಿವೆ.
ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಟಿಕೆಟ್ ಕಾಯ್ದಿರಿಸಲು ಅವಕಾಶ ನೀಡಲಾಗಿದೆ. ನಾಲ್ಕಕ್ಕಿಂತ ಹೆಚ್ಚು ಟಿಕೆಟ್ಗಳನ್ನು ಒಟ್ಟಿಗೆ ಬುಕ್ ಮಾಡಿದರೆ ಶೇ.5 ರಿಯಾಯಿತಿ ದೊರೆಯಲಿದೆ. ಜೊತೆಗೆ ಹೋಗುವ ಮತ್ತು ಬರುವ ಎರಡೂ ಪ್ರಯಾಣದ ಟಿಕೆಟ್ಗಳನ್ನು ಒಟ್ಟಿಗೆ ಬುಕ್ ಮಾಡಿದರೆ ಶೇ.10 ರಿಯಾಯಿತಿ ನೀಡಲಾಗುತ್ತದೆ.
ಇದರ ಜೊತೆಗೆ ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಬಸ್ಗಳ ಕಾರ್ಯಾಚರಣೆ ನಡೆಸಲಾಗುತ್ತದೆ. ಹಬ್ಬಕ್ಕೆ ಊರಿಗೆ ತೆರಳುವ ಪ್ರಯಾಣಿಕರಿಗೆ ಸಾರಿಗೆ ಇಲಾಖೆಯ ಈ ವಿಶೇಷ ಬಸ್ ವ್ಯವಸ್ಥೆ ಗುಡ್ನ್ಯೂಸ್ ಆಗಿದೆ.
ಇದನ್ನೂ ಓದಿ : ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ



















