ಬೆಂಗಳೂರು : ಬೆಂಗಳೂರು ನಾಗರಿಕರಿಗೆ ಜಲಮಂಡಳಿಯಿಂದ ಸಿಹಿಸುದ್ದಿ ಲಭಿಸಿದೆ. ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಬಡ್ಡಿ ಮನ್ನಾ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಮಾಧ್ಯಮ ಪ್ರಕಟಣೆ ಮೂಲಕ ಈ ಮಾಹಿತಿ ನೀಡಿರುವ ಅವರು, ಏಪ್ರಿಲ್ ತಿಂಗಳಿಂದ ಮೂರು ತಿಂಗಳ ಅವಧಿಗೆ ಈ ಯೋಜನೆ ಅನ್ವಯವಾಗಲಿದೆ ಎಂದು ಹೇಳಿದ್ದಾರೆ. ಈ ಅವಧಿಯಲ್ಲಿ ಗ್ರಾಹಕರು ತಮ್ಮ ಬಾಕಿ ನೀರಿನ ಬಿಲ್ ಪಾವತಿಸಿದರೆ ಶೇ100ರಷ್ಟು ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆ.
ಗೃಹ, ವಾಣಿಜ್ಯ ಹಾಗೂ ಕೈಗಾರಿಕಾ ಸೇರಿದಂತೆ ಎಲ್ಲಾ ವರ್ಗದ ಗ್ರಾಹಕರಿಗೂ ಈ ಸೌಲಭ್ಯ ಅನ್ವಯವಾಗಲಿದೆ. ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವ್ಯಾಪ್ತಿಯ ಎಲ್ಲಾ ಬಳಕೆದಾರರು ಇದರ ಪ್ರಯೋಜನ ಪಡೆಯಬಹುದು.ಈ ವಿಶೇಷ ಅವಕಾಶವನ್ನು ಮುಂದಿನ ಮೂರು ತಿಂಗಳಲ್ಲಿ ಬಳಸಿಕೊಳ್ಳುವಂತೆ ಡಿಸಿಎಂ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಕೆಎಂಎಫ್‌ಗೂ ತಟ್ಟಿತು ವಾರ್ ಎಫೆಕ್ಟ್.. ನಂದಿನಿ ಉತ್ಪನ್ನಗಳ ತಯಾರಿ ಕಡಿತ



















