ದೆಹಲಿ, : ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಸೇನೆಗಳು ಈಗಲೂ ಜಂಟಿ ದಾಳಿ ನಡೆಸುತ್ತಿವೆ. ಇರಾನ್ ಕೂಡ ಪ್ರತಿದಾಳಿ ನಡೆಸುತ್ತಿದ್ದು, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಸ್ಥಿತಿ ಮುಂದುವರಿದಿದೆ. ಇದರ ಪರಿಣಾಮ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಎದುರಾಗಿದ್ದು, ತತ್ತರಿಸಿರುವ ಹೋಟೆಲ್ ಉದ್ಯಮಕ್ಕೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್ ನೀಡಿದೆ.
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು, ರಾಜ್ಯಗಳ ವಾಣಿಜ್ಯ ಎಲ್‌ಪಿಜಿ ಹಂಚಿಕೆಯನ್ನು ಶೇಕಡಾ 20ರಷ್ಟು ಹೆಚ್ಚಿಸಿರುವುದಾಗಿ ತಿಳಿಸಿದೆ. ಈ ಮೂಲಕ ಒಟ್ಟಾರೆ ಹಂಚಿಕೆ ಶೇಕಡಾ 50ಕ್ಕೆ ಏರಿದೆ. ಮಾರ್ಚ್ 23ರಿಂದ ಜಾರಿಗೆ ಬರುವಂತೆ ರಾಜ್ಯಗಳಿಗೆ ಹೆಚ್ಚುವರಿ ಶೇಕಡಾ 20ರಷ್ಟು ಎಲ್‌ಪಿಜಿ ಹಂಚಿಕೆ ಮಾಡಲಾಗುವುದು. ಮುಂದಿನ ಆದೇಶದವರೆಗೆ ಈ ವ್ಯವಸ್ಥೆ ಜಾರಿಯಲ್ಲಿರುತ್ತದೆ ಎಂದು ಮೂಲಗಳು ತಿಳಿಸಿವೆ.
ಹೊಸ ಶೇಕಡಾ 20ರಷ್ಟು ಹಂಚಿಕೆಯು ರೆಸ್ಟೋರೆಂಟ್‌ಗಳು, ಢಾಬಾಗಳು, ಹೋಟೆಲ್‌ಗಳು, ಕೈಗಾರಿಕಾ ಕ್ಯಾಂಟೀನ್‌ಗಳು ಮತ್ತು ಆಹಾರ ಸಂಸ್ಕರಣಾ ಘಟಕ ಮತ್ತು ಡೈರಿಗಳಿಗೆ ಅನ್ವಯವಾಗುತ್ತದೆ. ರಾಜ್ಯ ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳು ನಡೆಸುವ ಸಬ್ಸಿಡಿ ಕ್ಯಾಂಟೀನ್‌ಗಳು ಮತ್ತು ಔಟ್‌ಲೆಟ್‌ಗಳಿಗೂ ಇದರಿಂದ ಅನುಕೂಲವಾಗಲಿದೆ.
ಇದನ್ನೂ ಓದಿ : ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಮುರ್ಮು.. ತುಮಕೂರಲ್ಲಿ ಬಿಗಿ ಭದ್ರತೆ!


















