ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ವಾಹನ ಹತ್ತಿದ್ದು, ಅವಘಡವೊಂದು ತಪ್ಪಿದಂತಾಗಿದೆ.
ಬೆಳಗಾವಿ ತಾಲೂಕಿನ ಬಡೇಕೊಳ್ಳಮಠದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಬೆಳಗಾವಿಯಿಂದ ಧಾರವಾಡದ ಕಡೆಗೆ ಹೋಗುತ್ತಿದ್ದ ಗೂಡ್ಸ್ ವಾಹನದ ಚಾಲಕ ತನ್ನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿಸಿದ್ದು, ಪರಿಣಾಮ ಭಾರಿ ದೊಡ್ಡ ಅಪಘಾತವೇನೂ ಆಗಿಲ್ಲ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ಯ ಪ್ರಕರಣ ದಾಖಲಾಗಿದೆ.