ಬೆಂಗಳೂರು : ರೈಲ್ವೆ ಟ್ರ್ಯಾಕ್ ಬಳಿ ಕಿವಿಗೆ ಹೆಡ್‌ಫೋನ್ ಹಾಕಿಕೊಂಡು ಮ್ಯೂಸಿಕ್ ಕೇಳ್ತಾ ಹೊಗುತ್ತಿದ್ದ ವಿದ್ಯಾರ್ಥಿಗೆ ಗೂಡ್ಸ್ ಟ್ರೈನ್ ಡಿಕ್ಕಿ ಹೊಡೆದಿದ್ದು, ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಗೇನಹಳ್ಳಿಯಲ್ಲಿ ನಡೆದಿದೆ.
ಇಂದು ಬೆಳಗ್ಗೆ 6.30ರ ಸುಮಾರಿಗೆ ಘಟನೆ ನಡೆದಿದ್ದು, ಮೃತನನ್ನು ಸ್ಥಳೀಯ ಖಾಸಗಿ ಕಾಲೇಜಿನ ವಿದ್ಯಾರ್ಥಿ ಶಶಿಕುಮಾರ್ ಎಂದು ಗುರುತಿಸಾಲಗಿದೆ. ವಿಷಯ ತಿಳಿಯುತ್ತಿದ್ದಂತೆ ಬೈಯಪ್ಪನಹಳ್ಳಿ ರೈಲ್ವೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ವಿದ್ಯಾರ್ಥಿ ಶಶಿಕುಮಾರ್ ನಾಗೇನಹಳ್ಳಿಯಿಂದ ವೀರಣ್ಣನಪಾಳ್ಯ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದ. ಕಿವಿಯಲ್ಲಿ ಹೆಡ್‌ಪೋನ್ ಹಾಕಿಕೊಂಡಿದ್ದರಿಂದ ಟ್ರೈನ್ ಸೌಂಡ್ ಆತನಿಗೆ ಕೇಳಸಲಿಲ್ಲ, ಹಿಂಬದಿಯಿಂದ ರೈಲು ಬಂದು ಡಿಕ್ಕಿ ಹೊಡೆದಿದೆ. ಸದ್ಯ ಘಟನೆ ಬಗ್ಗೆ ಬೈಯಪ್ಪನಹಳ್ಳಿ ರೈಲ್ವೆ ಪೋಲಿಸರು ದೂರು ದಾಖಲಸಿಕೊಂಡು ತನಿಖೆ ನಡೆಸುತ್ತಿದ್ದಾರೆ.