ಬೆಂಗಳೂರು: ಜಾತಿಗಣತಿ ವೇಳೆ ಪಾಲಿಕೆ ಸಿಬ್ಬಂದಿ ಗೂಂಡಾಗಿರಿ ಮಾಡಿರುವ ವಿಡಿಯೋವೊಂದು ವೈರಲ್ ಆಗಿದೆ.
ಮಾಹಿತಿ ಪಡೆಯದೇ ಪೌರ ಕಾರ್ಮಿಕ ಸ್ಟಿಕ್ಕರ್ ಅಂಟಿಸಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಮನೆ ಮಾಲೀಕರ ಮೇಲೆ ಮಾಡಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಚಿಕ್ಕಕಲ್ಲಸಂದ್ರದ ಸಾರ್ವಭೌಮನಗರದಲ್ಲಿ ಈ ಘಟನೆ ನಡೆದಿದೆ. ನಂದೀಶ್ ಎನ್ನುವವರ ಮೇಲೆ ಪಾಲಿಕೆ ಸಿಬ್ಬಂದಿ ಹಲ್ಲೆ ನಡೆಸಿದ್ದು, ಗುಂಡಾವರ್ತನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬುಧವಾರ ಬೆಳಗ್ಗೆ 9.30ರ ವೇಳೆ ಜಾತಿ ಸಮೀಕ್ಷೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ಹೀಗಾಗಿ ಪಾಲಿಕೆ ಸಿಬ್ಬಂದಿ ವಿರುದ್ಧ ಮನೆ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಿಯಾಗಿ ಸರ್ವೇ ಮಾಡದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿದ್ದಾರೆಂದು ಪಾಲಿಕೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ದೂರು ದಾಖಲಿಸಲು ಹೋದರೆ ಪೊಲೀಸರು ರಾಜಿಗೆ ಮುಂದಾಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.