ಬೆಂಗಳೂರು : ದೇಶದಲ್ಲೇ ಅತ್ಯಂತ ಹಳೆಯ ಫ್ಲೈಯಿಂಗ್ ಟ್ರೈನಿಂಗ್ ಸ್ಕೂಲ್ ಎನಿಸಿರುವ, ಬೆಂಗಳೂರಿನ ಜಕ್ಕೂರಿನಲ್ಲಿರುವ ಸರ್ಕಾರಿ ಫ್ಲೈಯಿಂಗ್ ಟ್ರೈನಿಂಗ್ ಸ್ಕೂಲ್ ನಲ್ಲಿ ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ (Government Aeronautical Training School Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 3 ಚೀಫ್ ಫ್ಲೈಟ್ ಇನ್ ಸ್ಟ್ರಕ್ಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿ ಸಂಸ್ಥೆ: ಸರ್ಕಾರಿ ಫ್ಲೈಯಿಂಗ್ ಟ್ರೈನಿಂಗ್ ಸ್ಕೂಲ್
ಒಟ್ಟು ಹುದ್ದೆಗಳು: 3
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 9
ಉದ್ಯೋಗ ಸ್ಥಳ: ಬೆಂಗಳೂರು
1 ಚೀಫ್ ಫ್ಲೈಟ್ ಇನ್ ಸ್ಟ್ರಕ್ಟರ್, 1 ಡೆಪ್ಯೂಟಿ ಚೀಫ್ ಫ್ಲೈಟ್ ಇನ್ ಸ್ಟ್ರಕ್ಟರ್ ಹಾಗೂ 1 ಅಸಿಸ್ಟಂಟ್ ಫ್ಲೈಟ್ ಇನ್ ಸ್ಟ್ರಕ್ಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ 50ರಿಂದ 60 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ 080-23332251 / 9743739141 ಗೆ ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸುವವರು ಮೊದಲಿಗೆ dyes.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಳ್ಳಬೇಕು. ಇದಾದ ಬಳಿಕ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
To Government Aviation Training School, Jakkur Airport, Yelahanka Post Office, Bangalore-560064. ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಗಳನ್ನು gfts.kar@gmail.com ಗೆ ಮೇಲ್ ಮಾಡಬಹುದು.
ಇದನ್ನೂ ಓದಿ : ಪಂಜಾಬ್ ಮತದಾರರ ಪಟ್ಟಿಯಿಂದ ಬಿಜೆಪಿ ನಾಯಕ ರಾಘವ್ ಚಡ್ಡಾ ಹೆಸರು ಡಿಲೀಟ್ : ಆಪ್ ವಿರುದ್ಧ ಆಕ್ರೋಶ



















