ಶಿವಮೊಗ್ಗ: ಹೃದಯಾಘಾತಕ್ಕೆ ಸರ್ಕಾರಿ ವೈದ್ಯರೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ.
ಡಾ.ಎನ್.ಸಂದೀಪ್ (48) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯ ಡಾ. ಸಂದೀಪ್ ಸಾವನ್ನಪ್ಪಿದ್ದಾರೆ.
ಡಾ. ಸಂದೀಪ್ ಈ ಆರೋಗ್ಯ ಕೇಂದ್ರದಲ್ಲಿ ಕಳೆದ 8 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಜನಾನುರಾಗಿಯಾಗಿ ಕೆಲಸ ಮಾಡುತ್ತಿದ್ದ ಸಂದೀಪ್, ರಾತ್ರಿ ಪಾಳೆಯಲ್ಲಿ ಬರುತ್ತಿದ್ದ ರೋಗಿಗಳಿಗೆ ಉತ್ತಮವಾಗಿ ತುರ್ತು ಚಿಕಿತ್ಸೆ ನೀಡುತ್ತಿದ್ದರು ಎನ್ನಲಾಗಿದೆ. ಸಂದೀಪ್ ಅವರ ಅಗಲಿಕೆಯಿಂದ ಆಘಾತಕ್ಕೊಳಗಾಗಿರುವ ಕೇಂದ್ರದ ಸಿಬ್ಬಂದಿ ಮತ್ತು ಸ್ಥಳೀಯರು ಕಣ್ಣೀರು ಸುರಿಸಿದ್ದಾರೆ.