ಬೆಂಗಳೂರು : ರಾಜ್ಯ ಸರ್ಕಾರವು 2026-27ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಅಧಿಕೃತವಾಗಿ ಪ್ರಕಟಿಸಿದೆ. ಆಡಳಿತಾತ್ಮಕ ದಕ್ಷತೆ ಹೆಚ್ಚಿಸುವುದು ಹಾಗೂ ನೌಕರರ ಹಿತಾಸಕ್ತಿಯನ್ನು ಕಾಪಾಡುವುದು ಈ ಮಾರ್ಗಸೂಚಿಗಳ ಮುಖ್ಯ ಉದ್ದೇಶವಾಗಿದೆ.

ವರ್ಗಾವಣೆ ಪ್ರಕ್ರಿಯೆ ಇಂದಿನಿಂದಲೇ (ಏಪ್ರಿಲ್ 14 , 2026) ಆರಂಭವಾಗಿದ್ದು, ಅರ್ಹ ಮತ್ತು ಆಸಕ್ತ ನೌಕರರು ತಮ್ಮ ಅರ್ಜಿಗಳನ್ನು ಸಲ್ಲಿಸಲು ಮೇ 31, 2026 ಕೊನೆಯ ದಿನಾಂಕವಾಗಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದೆ.
ಈ ಬಾರಿ ವರ್ಗಾವಣೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ಸರ್ಕಾರ ಒತ್ತು ನೀಡಿದೆ. ಅರ್ಜಿ ಸಲ್ಲಿಸುವ ಎಲ್ಲ ನೌಕರರೂ ತಮ್ಮ ಸೇವಾ ದಾಖಲೆಗಳನ್ನು ನಿಖರವಾಗಿ ಸಲ್ಲಿಸುವುದು ಕಡ್ಡಾಯವಾಗಿದೆ. ವೈಯಕ್ತಿಕ ಮನವಿಗಳಿಗಿಂತ ಇಲಾಖೆಯ ಆಡಳಿತಾತ್ಮಕ ಅಗತ್ಯತೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.
ವಿಶೇಷ ಆದ್ಯತೆಗಳು
- ಕೆಲವು ಮಾನವೀಯ ಕಾರಣಗಳಿಗೆ ಮಾರ್ಗಸೂಚಿಯಲ್ಲಿ ವಿಶೇಷ ಅವಕಾಶ ಕಲ್ಪಿಸಲಾಗಿದೆ.
- ಆರೋಗ್ಯ ಸಮಸ್ಯೆಗಳು. ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ನೌಕರರಿಗೆ ಆದ್ಯತೆ ನೀಡಲಾಗಿದೆ. ಇನ್ನೂ ಮಹಿಳಾ ನೌಕರರು. ಗರ್ಭಿಣಿ ಮಹಿಳೆಯರ ಅರ್ಜಿಗಳಿಗೆ ಪ್ರಾಥಮ್ಯ
- ಕುಟುಂಬದ ತುರ್ತು ಪರಿಸ್ಥಿತಿ: ಮಕ್ಕಳ ಶಿಕ್ಷಣ ಅಥವಾ ಕುಟುಂಬದ ಅವಶ್ಯಕತೆಗಳ ಆಧಾರದ ಮೇಲೆ ವಿನಾಯಿತಿ
- ವರ್ಗಾವಣೆಗೊಂಡ ನೌಕರರಿಗೆ ಸೇವಾ ಅವಧಿ ಮತ್ತು ಹುದ್ದೆಯ ಶ್ರೇಣಿಗೆ ಅನುಗುಣವಾಗಿ ವರ್ಗಾವಣೆ ಭತ್ಯೆ (Transfer Allowance) ಹಾಗೂ ಇತರೆ ಸರ್ಕಾರಿ ಸೌಲಭ್ಯಗಳು ಲಭ್ಯವಾಗಲಿವೆ.
- ಅರ್ಹ ನೌಕರರು ನಿಗದಿತ ಅವಧಿಯೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸುವಂತೆ ಸರ್ಕಾರ ಮನವಿ ಮಾಡಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಇಲಾಖೆಯ ಅಧಿಕೃತ ಜಾಲತಾಣ ಅಥವಾ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸೂಚಿಸಲಾಗಿದೆ.



















