ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಇತ್ತೀಚೆಗೆ ರದ್ದುಗೊಳಿಸಿತ್ತು. ಈ ಬೆನ್ನಲ್ಲೇ ಇದೀಗ ಅಲೋಕ್ ಕುಮಾರ್‌ಗೆ ಎಡಿಜಿಪಿಯಿಂದ ಡಿಜಿಪಿಯಾಗಿ ಬಡ್ತಿ ನೀಡಿದ ರಾಜ್ಯ ಸರ್ಕಾರ, ಕಾರಾಗೃಹ ಇಲಾಖೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಅಲೋಕ್ ಕುಮಾರ್‌ಗೆ ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ವರ್ಗಾವಣೆ ಹಿನ್ನೆಲೆ ಪೊಲೀಸ್ ತರಬೇತಿ ಇಲಾಖೆಯ ಎಡಿಜಿಪಿಯಾಗಿ ಬಿ.ದಯಾನಂದ್ರನ್ನು ವರ್ಗಾವಣೆ ಮಾಡಿದೆ.

ತಮಗೆ ಪೊಲೀಸ್ ಇಲಾಖೆಯಲ್ಲಿ ಬಡ್ತಿ ನೀಡುತ್ತಿಲ್ಲ ಎಂದು ದೂರಿ ಅಲೋಕ್ ಕುಮಾರ್ ಅವರು ಕೆಎಟಿಗೆ ಅರ್ಜಿ ಸಲ್ಲಿಸಿದ್ದರು. ತಮ್ಮನ್ನು ಕಡೆಗಣಿಸಿ ಅರುಣ್ ಚಕ್ರವರ್ತಿ ಮತ್ತು ಉಮೇಶ್ ಕುಮಾರ್ ಅವರಿಗೆ ಬಡ್ತಿ ನೀಡಲಾಗಿದೆ ಎಂದು ಅಲೋಕ್ ಕುಮಾರ್ ಕೆಎಟಿಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಮನವಿ ಮಾಡಿದ್ದರು. ಕೊನೆಗೆ ಈಗ ರಾಜ್ಯ ಸರ್ಕಾರ ಅಲೋಕ್ ಕುಮಾರ್ ಅವರಿಗೆ ಬಡ್ತಿ ನೀಡಿ ಕಾರಾಗೃಹ ಇಲಾಖೆಯ ಡಿಜಿಪಿ ಆಗಿ ನೇಮಿಸಿದೆ.
ಇದನ್ನೂ ಓದಿ : ODI ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಜಿಗಿದ ವಿರಾಟ್ ಕೊಹ್ಲಿ | ಅಗ್ರಸ್ಥಾನ ಯಾರಿಗೆ?



















