ಒಂದು ಕಡೆ ಕೊರೊನಾ ಮಹಾಮಾರಿ ಮತ್ತೆ ಎಂಟ್ರಿ ಕೊಟ್ಟಿದ್ದರೆ, ಇನ್ನೊಂದೆಡೆ ಬೇಸಿಗೆ ರಜೆ ಮುಗಿದು ಶಾಲೆಗಳು ಪುನರಾರಂಭವಾಗುತ್ತಿವೆ. ಇಂತಹ ಸಂದರ್ಭದಲ್ಲಿ ಮಕ್ಕಳ ಹಿತದೃಷ್ಟಿಯಿಂದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಸರ್ಕಾರದಿಂದ ಗೈಡ್‌ಲೈನ್ಸ್ ನೀಡಲಾಗಿದೆ.
ಗೈಡ್ ಲೈನ್ಸ್ ನಲ್ಲಿ ಏನೆಲ್ಲ ಅಂಶಗಳಿವೆ?
ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಗುಣ ಲಕ್ಷಣಗಳು ಬಂದರೆ ಶಾಲೆಗೆ ಕಳುಹಿಸಬಾರದು. ಸಂಪೂರ್ಣವಾಗಿ ಗುಣಮುಖರಾದ ಮೇಲೆ ಶಾಲೆಗಳಿಗೆ ಕಳುಹಿಸಬೇಕು. ಕೊರೊನಾದಂತಹ ಗುಣಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದರೆ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮವನ್ನು ಪಾಲಿಸಬೇಕು. ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಉಲ್ಲೇಖಿಸಲಾಗಿದೆ.


















