ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ – ಕಾಂಗ್ರೆಸ್ ಸಾರಥ್ಯದ ಮೈತ್ರಿ ಸರ್ಕಾರ ರಚನೆಯಾಗುವುದು ಖಚಿತವಾಗಿದೆ.
ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮುತ್ತಿದೆ. ಸದ್ಯದ ಟ್ರೆಂಡ್ ನಂತೆ 39 ಸ್ಥಾನಗಳಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಗೆಲ್ಲಬಹುದು. ಎರಡನೇ ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರ ಹೊಮ್ಮಿದ್ದು, 26 ಸ್ಥಾನಗಳು ಸಿಗುವ ಸಾಧ್ಯತೆ ಇದೆ. ನ್ಯಾಷನಲ್ ಕಾನ್ಫರೆನ್ಸ್‌ನ ಮಿತ್ರ ಪಕ್ಷ ಕಾಂಗ್ರೆಸ್ 10 ಸ್ಥಾನಗಳಲ್ಲಿ ಗೆಲ್ಲಬಹುದಾಗಿದೆ.
ಹೀಗಾಗಿ ಕಾಂಗ್ರೆಸ್ ಮತ್ತು ಎನ್ ಸಿ ಸರ್ಕಾರ ರಚಿಸುವ ಸಾಧ್ಯತೆ ಇದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು ಪಿಡಿಪಿ ಪಕ್ಷದ ಜೊತೆಗೂ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಕೂಡಾ ಹೆಚ್ಚಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ 90 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಈ ಪೈಕಿ ಯಾವುದೇ ಪಕ್ಷ ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್ 46 ಸ್ಥಾನಗಳನ್ನು ಪಡೆದಿಲ್ಲ. ಚುನಾವಣಾ ಪೂರ್ವ ಮೈತ್ರಿ ಇರುವ ಕಾರಣ ನ್ಯಾಷನಲ್ ಕಾನ್ಪರೆನ್ಸ್ ಪಕ್ಷದ ಸರ್ಕಾರ ರಚನೆ ಬಹುತೇಕ ನಿಚ್ಚಳವಾಗಿದೆ. ಈ ಹಂತದಲ್ಲಿ ಪಿಡಿಪಿ ಜೊತೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯೂ ಇದೆ. ಪಿಡಿಪಿ 5 ಸ್ಥಾನಗಳಲ್ಲಿ ಗೆಲ್ಲುವ ನಿರೀಕ್ಷೆ ಇದ್ದು, ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ಪಕ್ಷಗಳ ಸಾರಥ್ಯದ ಸಮ್ಮಿಶ್ರ ಸರ್ಕಾರವನ್ನು ಇನ್ನಷ್ಟು ಭದ್ರಪಡಿಸಲು ಪಿಡಿಪಿ ದೋಸ್ತಿ ಸೇರಬಹುದು.
ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಜಮ್ಮು ಪ್ರಾಂತ್ಯದಲ್ಲಿ ಪ್ರಾಬಲ್ಯ ಸಾಧಿಸಿರುವ ಬಿಜೆಪಿ, 25 ಸ್ಥಾನಗಳಲ್ಲಿ ಗೆಲ್ಲಬಹುದು ಎನ್ನಲಾಗುತ್ತಿದೆ.