ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿರುವ ವಿಷಯ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದೇ ವಿಷಯ ಮುಂದಿಟ್ಟುಕೊಂಡು ಆಡಳಿತ ಪಕ್ಷ ಹಣೆಯುವುದಕ್ಕಾಗಿ ವಿರೋಧ ಪಕ್ಷಗಳು ಹವಣಿಸುತಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ಸಿಹಿ ಸುದ್ದಿ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು, ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಈ ಮೂಲಕ ಯಾವೊಬ್ಬ ಬಡವರಿಗೂ ಅನ್ಯಾಯವಾಗಲು ನಾನು ಬಿಡುವುದಿಲ್ಲ ಎಂದಿದ್ದಾರೆ. ರಾಜ್ಯದ ಯಾವ ಬಡ ಕುಟುಂಬದವರು ಅನ್ನಭಾಗ್ಯ ಯೋಜನೆಯಿಂದ ವಂಚಿತವಾಗಬಾರದು. ಇದಕ್ಕಾಗಿ ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದಿದ್ದಾರೆ.
ಕೆಲವು ಅನರ್ಹರು ಸೌಲಭ್ಯ ಪಡೆದುಕೊಂಡರೂ ಚಿಂತೆ ಇಲ್ಲ. ಅರ್ಹರು ಅನ್ನಭಾಗ್ಯ ಯೋಜನೆಯಿಂದ ವಂಚಿತರಾಗಬಾರದು. ಎಲ್ಲ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಸಿಗಬೇಕು. ಸರ್ಕಾರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡುತ್ತಿದೆ ಎಂದು ಸುಳ್ಳು ವರದಿಯಾಗಳಾಗುತ್ತಿವೆ. ಆದರೆ, ಅರ್ಹರಿಗೆ ಯಾವುದೇ ಮೋಸವಾಗುವುದಿಲ್ಲ ಎಂದಿದ್ದಾರೆ.