ಬೆಂಗಳೂರು: ರಾಜ್ಯ ಸರ್ಕಾರ ವಿಧಾನಪರಿಷತ್ ಸದನದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕ – 2025 ರ ಮಂಡನೆ ಮಾಡುತ್ತಿದ್ದಂತೆ ಎರಡು ಸದನಗಳಲ್ಲೂ ವಿಪಕ್ಷಗಳ ಸದಸ್ಯರು ಆಕ್ರೋಶ ಹೊರ ಹಾಕಿದ್ದರು.
ನಿನ್ನೆ ವಿಧಾನಮಂಡಲದ ಜಂಟಿ ಅಧುವೇಶನದ ಕೊನೆಯ ದಿನವಾಗಿದ್ದು, ವಿಧಾನಪರಿಷತ್‌ನಲ್ಲಿ ವಿಧೇಯಕ ಮಂಡನೆ ಆಗುತ್ತಿದ್ದಂತೆ ವಿಪಕ್ಷಗಳ ಸದಸ್ಯರು ಕೆಂಡಮಂಡಲರಾದರು. ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ಬಿಜೆಪಿ ಸದಸ್ಯರಾದ ಸಿ.ಟಿ.ರವಿ, ನವೀನ್ ಸೇರಿದಂತೆ ಎಲ್ಲಾ ಸದಸ್ಯರು ಸರ್ಕಾರ ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದರು. ಆದ್ರೂ ಸರ್ಕಾರ ಈ ಬಾರಿಯ ಅಧಿವೇಶನದಲ್ಲಿ ಎರಡು ಸದನಗಳಲ್ಲೂ ವಿಧಾನಪರಿಷತ್ ಸದನದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕ – 2025 ರ ಮಂಡಿಸಿ, ಅಂಗೀಕಾರ ಪಡೆದುಕೊಂಡಿದೆ.