ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಈ ಮೊದಲು ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರವನ್ನು ಸರ್ಕಾರ ಘೋಷಿಸಿತ್ತು. ಆದರೆ, ಪರಿಹಾರದ ಮೊತ್ತ ಏರಿಕೆ ಮಾಡಬೇಕೆಂಬ ಕೂಗು ಕೇಳಿ ಬಂದಿತ್ತು. ಇಂದು ಸಚಿವ ಸಂಪುಟ ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಅವರು ಪರಿಹಾರವನ್ನು 25 ಲಕ್ಷ ರೂ.ಗಳಿಗೆ ಏರಿಸಿ ಆದೇಶ ಹೊರಡಿಸಿದ್ದಾರೆ. ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿ, 60ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಈಗಾಗಲೇ ಈ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ.