ಬೆಂಗಳೂರು: 76ನೇ ಗಣರಾಜ್ಯೋತ್ಸವದ (Republic Day 2025)ದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಮಾಣೆಕ್ಷಾ ಪರೇಡ್ ಮೈದಾನದಲ್ಲಿ (Manekshaw Parade Ground) ಧ್ವಜಾರೋಹಣ ನೆರವೇರಿಸಿದರು.
ಈ ವೇಳೆ ಸಿಎಂ ಸಿದ್ದರಾಮಯ್ಯ (Siddaramaiah) ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಸ್ಥಲದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. 8 ಮಂದಿ ಡಿಸಿಪಿ, 17 ಮಂದಿ ಎಸಿಪಿ, 44 ಮಂದಿ ಪಿಐ ಸೇರಿ 1051 ಪೊಲೀಸರ ನಿಯೋಜನೆ ಮಾಡಲಾಗಿದೆ. ಇದರ ಜೊತೆಗೆ 114 ಪಿಎಸ್ಐ, 58 ಎಎಸ್ಐ, 80 ಸಿಬ್ಬಂದಿ, 30 ಕ್ಯಾಮೆರಾ ಸಿಬ್ಬಂದಿಯಿಂದ ಭದ್ರತೆ ಒದಗಿಸಲಾಗಿದೆ. ಬಂದೋಬಸ್ತ್ಗೆ 10 ಕೆಎಸ್ಆರ್ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡ ಕೂಡ ನಿಯೋಜನೆಗೊಂಡಿದೆ. ಮೈದಾನದ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ ಹೇರಲಾಗಿದೆ.