ರಾಜ್ಯದಲ್ಲಿ ನಾಲ್ಕು ಬಾರಿ ಸಿಎಂ ಆಗಿದ್ದ ಚಿತ್ರದುರ್ಗದ ದಿ. ಎಸ್.ನಿಜಲಿಂಗಪ್ಪ ಅವರ ಮನೆಯನ್ನು ರಾಜ್ಯ ಸರ್ಕಾರ ಖರೀದಿಸಿದೆ ಎನ್ನಲಾಗಿದೆ.
ಮಾಜಿ ಸಿಎಂ ಎಸ್ ನಿಜಲಿಂಗಪ್ಪ ಅವರ ಮನೆಯನ್ನು ರಾಜ್ಯ ಸರ್ಕಾರ 5,00,00,000 ರೂಪಾಯಿಗೆ ಖರೀಸಿದೆ ಎನ್ನಲಾಗುತಿದೆ.
ನಿಜಲಿಂಗಪ್ಪ ಅವರ ಮನೆ ಖರೀದಿಸಿ, ಸಂರಕ್ಷಿಸಿ ಅಭಿವೃದ್ಧಿಪಡಿಸಲು ಸರ್ಕಾರ ಸಜ್ಜಾಗಿದೆ. ಈ ಉದ್ದೇಶದಿಂದ 5,00,00,000 ರೂಪಾಯಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ. 2 ಕೋಟಿ ಹಣವನ್ನು ಚಿತ್ರದುರ್ಗ ಜಿಲ್ಲಾಧಿಕಾರಿ ಖಾತೆಗೆ ಸರ್ಕಾರ ಬಿಡುಗಡೆ ಮಾಡಿದೆ. ಪುತ್ರ ಕಿರಣ್ ಶಂಕರ್ ನಿಜಲಿಂಗಪ್ಪ ಮನೆ ಮಾರಾಟಕ್ಕಿದೆ ಎಂದು ಜಾಹೀರಾತು ನೀಡಿದ್ದರು. ಹೀಗಾಗಿ ಸರ್ಕಾರ ಈ ಮನೆಯನ್ನು ಖರೀದಿಸಿದೆ.
ಕೆಪಿಸಿಸಿಯಿಂದ ನಿಜಲಿಂಗಪ್ಪನವರ ಮನೆ ಖರೀದಿ ಬಗ್ಗೆ ಕಾಂಗ್ರೆಸ್ ಚಿಂತನೆ ಮಾಡಿತ್ತು. ಇದೇ ವಿಚಾರಕ್ಕೆ ಸೆಪ್ಟೆಂಬರ್ 2ರಂದು ನಿಜಲಿಂಗಪ್ಪ ನಿವಾಸಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿದ್ದರು. ನಿಜಲಿಂಗಪ್ಪ ಅವರ ಪುತ್ರ ಕಿರಣ್ ಈಗ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ ಎನ್ನಲಾಗಿದೆ.