ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಚಿವ ಬಾಲಕೃಷ್ಣ ಪತ್ನಿ ಹೆಸರಿಗೆ 100 ಕೋಟಿ ಮೌಲ್ಯದ ಸರ್ಕಾರಿ ಜಮೀನು? ; ‘ಲೋಕಾ’ಗೆ N.R. ರಮೇಶ್ ದೂರು!

August 10, 2026
Share on WhatsappShare on FacebookShare on Twitter

ಬೆಂಗಳೂರು : ಸಚಿವ ಎಚ್.ಸಿ. ಬಾಲಕೃಷ್ಣ ಅವರ ಧರ್ಮಪತ್ನಿ ರಾಧಾ ಬಾಲಕೃಷ್ಣ ಅವರ ಹೆಸರಿಗೆ 100 ಕೋಟಿಗೂ ಹೆಚ್ಚು ಮೌಲ್ಯದ ಸರ್ಕಾರಿ ಜಮೀನಿಗೆ ಏಕ ನಿವೇಶನ ಖಾತಾ ಮಾಡಿಕೊಡಲಾಗಿದೆ ಎಂದು ಆರೋಪಿಸಿ ಮಾಜಿ ಬಿಬಿಎಂಪಿ ಸದಸ್ಯ, ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಇದೇ ವೇಳೆ ಮತ್ತೊಂದು ಪ್ರಕರಣದಲ್ಲಿ ಉತ್ತರಹಳ್ಳಿ ಹೋಬಳಿಯ ಯು.ಎಂ. ಕಾವಲ್ ಗ್ರಾಮದ ಸರ್ವೆ ನಂಬರ್ 18ರಲ್ಲಿ ಸುಮಾರು 200 ಕೋಟಿಗೂ ಹೆಚ್ಚು ಮೌಲ್ಯದ 8 ಎಕರೆ ಸರ್ಕಾರಿ ಬಂಡೆ ಜಮೀನನ್ನು ಕಾಂಗ್ರೆಸ್ ಮುಖಂಡನ ಹೆಸರಿಗೆ ಪಹಣಿ ದುರಸ್ತಿ ಮಾಡಲಾಗಿದೆ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ.

ಸರ್ಕಾರಿ ಜಮೀನಿಗೆ ಪಹಣಿ, ಪೋಡಿ ದುರಸ್ತಿ ಆರೋಪ

ತಾವರೆಕೆರೆ ಹೋಬಳಿಯ ಕುರುಬರಹಳ್ಳಿ ಗ್ರಾಮದ ಸರ್ವೆ ನಂಬರ್ 158ರಲ್ಲಿನ ಸುಮಾರು 8 ಎಕರೆ ಸರ್ಕಾರಿ ಜಮೀನು ರಾಧಾ ಎಚ್.ಸಿ. ಬಾಲಕೃಷ್ಣ ಅವರ ಹೆಸರಿಗೆ ನೋಂದಣಿಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 2025ರ ಏಪ್ರಿಲ್ 3ರಂದು ನೀಲಮ್ಮ, ನಾಗಮ್ಮ ಹಾಗೂ ಗಂಗೂಬಾಯಿ ಮತ್ತು ಅವರ ಕುಟುಂಬಸ್ಥರಿಂದ, ಮೇ 15ರಂದು ದಿವಂಗತ ನರಸಿಂಹಯ್ಯ ಅವರ ಪುತ್ರ ಎನ್. ಶಿವಣ್ಣ ಅವರಿಂದ ಜಮೀನು ನೋಂದಣಿ ಮಾಡಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.

ಇದಾದ ಬಳಿಕ ರಾಜಕೀಯ ಒತ್ತಡಕ್ಕೆ ಒಳಗಾಗಿ ಸರ್ಕಾರಿ ಜಮೀನಿಗೆ ಪೋಡಿ ದುರಸ್ತಿ ಮಾಡಲಾಗಿದ್ದು, ಹೆಚ್ಚುವರಿಯಾಗಿ 2 ಎಕರೆ 20 ಗುಂಟೆ ಜಮೀನು ಸೇರಿಸಿ ಒಟ್ಟು 10 ಎಕರೆ 20 ಗುಂಟೆ ಜಮೀನನ್ನು ಕಾನೂನುಬಾಹಿರವಾಗಿ ಪೋಡಿ ಮಾಡಲಾಗಿದೆ ಎಂದು ಎನ್.ಆರ್. ರಮೇಶ್ ಆರೋಪಿಸಿದ್ದಾರೆ.
ಈ ಜಮೀನಿಗೆ ಮಾಡಿರುವ ಏಕ ನಿವೇಶನ ಖಾತೆ ಆಧರಿಸಿ ಗುರುರಾಜ್ ಎಸ್, ಚರಣ್ ಕನ್‌ಸ್ಟ್ರಕ್ಷನ್ಸ್ ಹಾಗೂ ಡಿ. ಕೇಶವ ಅವರುಗಳು ಸೇರಿಕೊಂಡು ಬೃಹತ್ ಬಡಾವಣೆಯನ್ನೇ ನಿರ್ಮಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

200 ಕೋಟಿ ಮೌಲ್ಯದ ಸರ್ಕಾರಿ ಬಂಡೆ ಜಮೀನಿಗೂ ಖಾತಾ?

ಉತ್ತರಹಳ್ಳಿ ಹೋಬಳಿ ಯು.ಎಂ. ಕಾವಲ್ ಗ್ರಾಮದ ಸರ್ವೆ ನಂಬರ್ 18ರಲ್ಲಿನ ಸುಮಾರು 8 ಎಕರೆ ಸರ್ಕಾರಿ ಬಂಡೆ ಜಮೀನನ್ನು ಎಂ. ಮಂಜುನಾಥ್, ಆರ್. ಶೋಭಾ ಮಂಜುನಾಥ್, ಉಮೇಶ್ ಬಾಬು ಎಸ್.ಬಿ., ಜಲಜದಾಸ್ ಹಾಗೂ ಬಿ.ಕೆ. ರಾಘವೇಂದ್ರ ಅವರ ಹೆಸರಿಗೆ ಪಹಣಿ ದುರಸ್ತಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸದರಿ ಜಮೀನಿನ ಕಬಳಿಕೆಗೆ ಯು.ಎಂ. ಕಾವಲ್‌ನಿಂದ ದೂರದಲ್ಲಿರುವ ವಜ್ರ ಮುನೇಶ್ವರ ರಸ್ತೆಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಬಳಸಿಕೊಂಡು ನೋಂದಣಿ ಮಾಡಲಾಗಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

ಸರ್ಕಾರಿ ಆಸ್ತಿ ಎಂದೇ ಜಿಲ್ಲಾಧಿಕಾರಿ ವರದಿ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು 2026ರ ಮಾರ್ಚ್ 27ರಂದು ನೀಡಿರುವ ವರದಿಯಲ್ಲಿ, ಸದರಿ ಆಸ್ತಿ ಸರ್ಕಾರಿ ಸ್ವತ್ತು ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ ಎಂದು ಎನ್.ಆರ್. ರಮೇಶ್ ತಿಳಿಸಿದ್ದಾರೆ. ಆದರೂ ರಾಜಕೀಯ ಮತ್ತು ಹಣದ ಪ್ರಭಾವಕ್ಕೆ ಒಳಗಾಗಿ ಸಂಬಂಧಪಟ್ಟ ಕಂದಾಯ ಹಾಗೂ ಭೂ ದಾಖಲೆಗಳ ಇಲಾಖೆಯ ಅಧಿಕಾರಿಗಳು ಸರ್ಕಾರಿ ಜಮೀನಿಗೆ ಏಕ ನಿವೇಶನ ಖಾತಾ ಮಾಡಿಕೊಟ್ಟಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಹಿಂದೆಯೇ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ದಾಖಲೆಗಳ ಸಹಿತ ದೂರು ನೀಡಲಾಗಿತ್ತು. ಸರ್ಕಾರಿ ಸ್ವತ್ತುಗಳನ್ನು ಕೂಡಲೇ ಜಿಲ್ಲಾಡಳಿತದ ವಶಕ್ಕೆ ಪಡೆಯುವಂತೆ ಮನವಿ ಮಾಡಲಾಗಿತ್ತು ಎಂದು ರಮೇಶ್ ಹೇಳಿದ್ದಾರೆ. ಆದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಇದೀಗ ಲೋಕಾಯುಕ್ತ ಪೊಲೀಸ್ ಮಹಾ ನಿರೀಕ್ಷಕರ ಕಚೇರಿಗೆ ಸಂಪೂರ್ಣ ದಾಖಲೆಗಳೊಂದಿಗೆ ದೂರು ಸಲ್ಲಿಸಲಾಗಿದೆ.

ಸರ್ಕಾರಿ ಭೂ ಕಬಳಿಕೆ, ನಕಲಿ ದಾಖಲೆ ತಯಾರಿಕೆ, ಭ್ರಷ್ಟಾಚಾರ ಹಾಗೂ ವಂಚನೆ ಸೇರಿದಂತೆ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಆಗ್ರಹಿಸಲಾಗಿದೆ. ಅಲ್ಲದೆ, ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಪ್ರಾದೇಶಿಕ ಆಯುಕ್ತರಿಗೂ ದೂರು ಸಲ್ಲಿಸಿ, ಸುಮಾರು 300 ಕೋಟಿಗೂ ಹೆಚ್ಚು ಮೌಲ್ಯದ ಸರ್ಕಾರಿ ಸ್ವತ್ತುಗಳನ್ನು ಸರ್ಕಾರದ ವಶಕ್ಕೆ ಪಡೆದು, ಅಕ್ರಮಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಮೇಶ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಆರೋಪ : ಸಚಿವ ಲಕ್ಷ್ಮಣ್‌ ಸವದಿ ವಿರುದ್ಧ ರಾಜ್ಯಪಾಲರಿಗೆ ದಿನೇಶ್‌ ಕಲ್ಲಹಳ್ಳಿ ದೂರು!

Tags: Balakrishna Ministergovernment landGovernment Land ScamKarnataka LokayuktaKarnataka NewsKarnataka News beatKarnataka Political Newskarnataka politicsKNBLand AllegationLokayukta ComplaintN R Ramesh
SendShareTweet
Previous Post

ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಆರೋಪ : ಸಚಿವ ಲಕ್ಷ್ಮಣ್‌ ಸವದಿ ವಿರುದ್ಧ ರಾಜ್ಯಪಾಲರಿಗೆ ದಿನೇಶ್‌ ಕಲ್ಲಹಳ್ಳಿ ದೂರು!

Next Post

ನುಸುಳುಕೋರನ ಬಿಡುಗಡೆಗಾಗಿ ಪ.ಬಂಗಾಳದ ರೈತನನ್ನು ಅಪಹರಿಸಿ ಬಾಂಗ್ಲಾಗೆ ಒಯ್ದ ದುಷ್ಕರ್ಮಿಗಳು

Related Posts

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!
ಬೆಂಗಳೂರು

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ದುರಂತ ; ಸುಟ್ಟು ಕರಕಲಾದ ಬೋಗಿ!

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!
ಬೆಂಗಳೂರು

ಅಮೋಘ ಆಟ : ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ ಮುಡಿಗೇರಿಸಿಕೊಂಡ ಅರವಿಂದ್‌ ಅವೇಂಜರ್ಸ್!

ನಾಡಿನೆಲ್ಲೆಡೆ  ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!
ಬೆಂಗಳೂರು

ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ; ಇಸ್ಕಾನ್‌ನಲ್ಲಿ ಬಾಲಗೋಪಾಲನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ!

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!
ಬೆಂಗಳೂರು

ಗೌರಿ-ಗಣೇಶ ಹಬ್ಬಕ್ಕೆ ಸಾರಿಗೆ ಇಲಾಖೆಯಿಂದ ಗುಡ್‌ನ್ಯೂಸ್ : 2,400ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಕಾರ್ಯಾಚರಣೆ!

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!
ಬೆಂಗಳೂರು

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!
ಬೆಂಗಳೂರು

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

Next Post
ನುಸುಳುಕೋರನ ಬಿಡುಗಡೆಗಾಗಿ ಪ.ಬಂಗಾಳದ ರೈತನನ್ನು ಅಪಹರಿಸಿ ಬಾಂಗ್ಲಾಗೆ ಒಯ್ದ ದುಷ್ಕರ್ಮಿಗಳು

ನುಸುಳುಕೋರನ ಬಿಡುಗಡೆಗಾಗಿ ಪ.ಬಂಗಾಳದ ರೈತನನ್ನು ಅಪಹರಿಸಿ ಬಾಂಗ್ಲಾಗೆ ಒಯ್ದ ದುಷ್ಕರ್ಮಿಗಳು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!

ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ಪ-ಮಗ!

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!

“ರಾಜ್ಯದ ಮೂಲೆ ಮೂಲೆಯಲ್ಲಿ ತಿರಂಗಾ ಯಾತ್ರೆ ಮಾಡ್ತೀವಿ” ; ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat