ಮೈಸೂರು:ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ದಸರಾ ಕಂಬಳ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ದೀಪ ಬೆಳಗುವ ಮೂಲಕ ಕಂಬಳ ಸ್ಪರ್ಧೆಯನ್ನು ಉದ್ಘಾಟಿಸಿದರು. ವೇದಿಕೆಯ ಮೇಲಿದ್ದ ಗಂಗಾಧರ ಅಜ್ಜಯ್ಯ ಹಾಗೂ ತಾಯಿ ಚಾಮುಂಡಿಗೆ ಡಿ.ಕೆ ಶಿವಕುಮಾರ ಪುಷ್ಪರ್ಚನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವ ಪುಟ್ಟರಂಗಶೆಟ್ಟಿ, ಎನ್ ಚಲುವರಾಯಸ್ವಾಮಿ, ಶಾಸಕರಾದ ಜಿಟಿದೇವೇಗೌಡ, ತನ್ವೀರ್ ಸೇಠ್, ಕೆ.ಹರೀಶ್ ಗೌಡ ಹಾಗೂ ಪುತ್ತೂರು ಶಾಸಕ ಅಶೋಕ ರೈ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


















