ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತೊಮ್ಮೆ ಸರ್ಕಲ್ ಬೇಸ್ಡ್ ಆಫೀಸರ್ (CBO) ನೇಮಕಾತಿ 2025 ರ ಅಡಿಯಲ್ಲಿ 2600 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಿದೆ.
ಇದರಿಂದಾಗಿ ಹಿಂದೆ ಅರ್ಜಿ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳು ಈಗ ಜೂನ್ 21 ರಿಂದ ಜೂನ್ 30 ರ ವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ sbi.co.in/web/careers ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. 2,600 ಹುದ್ದೆಗಳ ಪೈಕಿ 1,066 ಹುದ್ದೆಗಳನ್ನು ಮೀಸಲಾತಿ ರಹಿತ ವರ್ಗಕ್ಕೆ, 387 ಎಸ್ಸಿ, 190 ಎಸ್ಸಿ, 697 ಒಬಿಸಿ ಮತ್ತು 260 ಇಡಬ್ಲ್ಯೂಎಸ್ ವರ್ಗಕ್ಕೆ ಮೀಸಲಿಡಲಾಗಿದೆ.
ಅಭ್ಯರ್ಥಿಗಳು ಪದವಿ ಪಡೆದಿರಬೇಕು. ಅಲ್ಲದೆ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವ ಅಗತ್ಯ. ವಯೋಮಿತಿ 21 ರಿಂದ 30 ವರ್ಷಗಳ ನಡುವೆ ಇರಬೇಕು. ಮೀಸಲಾತಿ ವರ್ಗಗಳಿಗೆ ವಿನಾಯಿತಿ ಇದೆ. ಆಯ್ಕೆ ಆನ್‌ಲೈನ್ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನ ಸೇರಿದಂತೆ ಮೂರು ಹಂತದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.