ಬೆಂಗಳೂರು: ನಟ ಧ್ರುವ ಸರ್ಜಾ (Dhruva Sarja)ಗೆ ಅರ್ಜುನ್ ಸರ್ಜಾ ನಿರ್ದೇಶನದ ‘ಸೀತಾ ಪಯಣ’ ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ ಎನ್ನಲಾಗಿದೆ.
ಈಗ ಧ್ರುವ ಸರ್ಜಾ, ‘ಮಾರ್ಟಿನ್’ (Martin) ನಂತರ ‘ಕೆಡಿ’(KD Film) ಚಿತ್ರದತ್ತ ಗಮನ ಹರಿಸಿದ್ದಾರೆ. ಇದರ ನಡುವೆಯೇ ಹೊಸ ಸಿನಿಮಾದ ಬಗ್ಗೆ ಇಂಟರೆಸ್ಟಿಂಗ್ ಅಪ್‌ಡೇಟ್ ಸಿಕ್ಕಿದೆ. ಸೋದರ ಮಾವ ಅರ್ಜುನ್ ಸರ್ಜಾ (Arjun Sarja) ಜೊತೆ ಕೂಡ ಧ್ರುವ ಕೈ ಜೋಡಿಸುತ್ತಿದ್ದಾರೆ ಎನ್ನಲಾಗಿದೆ.
ಅರ್ಜುನ್ ಸರ್ಜಾ (Arjun Sarja) ನಿರ್ದೇಶನದ ‘ಸೀತಾ ಪಯಣ’ (Seetha Payana) ಸಿನಿಮಾದಲ್ಲಿ ಧ್ರುವ ಗೆಸ್ಟ್ ರೋಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚೆನ್ನೈನಲ್ಲಿ ಚಿತ್ರದ ಶೂಟಿಂಗ್ ನಡೆಯಲಿದೆ. ಅತಿಥಿ ಪಾತ್ರವಾಗಿದ್ದರೂ ಕೂಡ ಸಿನಿಮಾದಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಈ ಚಿತ್ರದಲ್ಲಿ ಧ್ರುವ ಜಬರ್‌ದಸ್ತ್ ಆದ ಆ್ಯಕ್ಷನ್ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
‘ಸೀತಾ ಪಯಣ’ ಸಿನಿಮಾದಲ್ಲಿ ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ನಾಯಕನಾಗಿ ನಟಿಸುತ್ತಿದ್ದಾರೆ.