ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ‘ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ’ಯ ವಿಸ್ತರಣೆ ಸೇರಿದಂತೆ ಹಲವು ಯೋಜನೆ ಜಾರಿ ಮಾಡಿದೆ. ಹೀಗಾಗಿ ರೈತ ಸಂಕುಲ ಖುಷಿಯಾಗಿದೆ ಎಂದು ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಧನ್ಯವಾದ ಅರ್ಪಿಸಿದ್ದಾರೆ.
ಈ ಕುರಿತು ತಮ್ಮ ‘ಎಕ್ಸ್’ ಖಾತೆ ಮೂಲಕ ಧನ್ಯವಾದ ಅರ್ಪಿಸಿದ ಅವರು, ಬೆಳೆ ವಿಮೆ ಯೋಜನೆಯ ವಿಸ್ತರಣೆ ಮತ್ತು ರಸಗೊಬ್ಬರ ಸಬ್ಸಿಡಿಗೆ 6,475 ಕೋಟಿ ರೂಪಾಯಿ ಮೊತ್ತದ ವಿಶೇಷ ಪ್ಯಾಕೇಜ್‌ಗೆ ಅನುಮೋದನೆ ಮಾಡುವ ಮೂಲಕ 2025ನೇ ಸಾಲಿನ ಮೊದಲ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ರೈತರಿಗೆ ಬಂಪರ್ ಕೊಡುಗೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ರಾಜ್ಯದ ರೈತರ ಪರವಾಗಿ ಅನಂತ ಧನ್ಯವಾದಗಳು ಎಂದಿದ್ದಾರೆ.