ಬೆಂಗಳೂರು: ನಗರದಲ್ಲಿ ಟನಲ್ ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಿನ್ನೆ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಸಭೆಯ ನಂತರ, ಟನಲ್ ರಸ್ತೆ ನಿರ್ಮಾಣಕ್ಕೆ ಡಿಸಿಎ ಡಿ.ಕೆ. ಶಿವಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ.
ಈ ಟನಲ್ ರಸ್ತೆಯು ನಗರದ ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಹೆಬ್ಬಾಳವರೆಗೆ ನಿರ್ಮಾಣವಾಗಲಿದೆ. ಈ ಕಾಮಗಾರಿಗೆ ಸಂಬಂಧಿಸಿದಂತೆ ಈಗಾಗಲೇ ಪಾಲಿಕೆಯು ಡಿಪಿಆರ್ ಸಿದ್ಧತೆ ಮಾಡಿದೆ. ಹೀಗಾಗಿ ಇದೇ ಫೆಬ್ರವರಿ ಕೊನೆಯ ವಾರದಲ್ಲಿ ಟೆಂಡರ್ ಗೆ ಆಹ್ವಾನಿಸಲಾಗಿದೆ.
ಸುಮಾರು 17.70 ಕೋಟಿ ವೆಚ್ಚದಲ್ಲಿ ಟನಲ್ ರಸ್ತೆ ನಿರ್ಮಾಣವಾಗಲಿದೆ. ಮೂರುವರೆ ವರ್ಷಗಳಲ್ಲಿ ಈ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ.
ಈಗಾಗಲೇ ಟನಲ್ ರಸ್ತೆ ನಿರ್ಮಾಣಕ್ಕೆ ಬ್ಯಾಂಕ್ ಗಳು ಸಾಲ ಕೊಡಲು ಮುಂದಾಗಿವೆ. HDFC, ಹುಡ್ಕೋ, ಪವರ್ ಕಾರ್ಪೋರೇಷನ್ ಬ್ಯಾಂಕ್ ಸೇರಿದಂತೆ ಅನೇಕ ಬ್ಯಾಂಕ್ ಗಳು ಮುಂದೆ ಬಂದಿವೆ.
ಈ ಕಾಮಗಾರಿಗಾಗಿ ಪಡೆಯುವ ಸಾಲಕ್ಕೆ ಸರ್ಕಾರವೇ ಗ್ಯಾರಂಟಿ ನೀಡುತ್ತದೆ. ಟನಲ್ ರಸ್ತೆ ನಿರ್ಮಾಣಕ್ಕೆ ಬಿಬಿಎಂಪಿ ಹಾಗೂ ಸರ್ಕಾರ ಸ್ವಲ್ಪ ಹಣ ನೀಡುತ್ತವೆ. ಉಳಿದ ಹಣವನ್ನು ಬ್ಯಾಂಕ್ ಗಳು ಸಾಲದ ರೂಪದಲ್ಲಿ ನೀಡುತ್ತವೆ. ನಗರದಲ್ಲಿನ ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡುವುದಕ್ಕಾಗಿ ಈ ಯೋಜನೆ ರೂಪಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.