ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಗ್ರಿಡ್ ಇಂಡಿಯಾ ಸಂಸ್ಥೆಯಲ್ಲಿ ಖಾಲಿ ಇರುವ 52 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 52 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇದರೊಂದಿಗೆ, ಕೇಂದ್ರ ಸರ್ಕಾರದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಇದು ಗುಡ್ ನ್ಯೂಸ್ ಎನಿಸಿದೆ. ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಗ್ರಿಡ್ ಇಂಡಿಯಾ
ಒಟ್ಟು ಹುದ್ದೆಗಳು: 52
ಹುದ್ದೆಗಳ ಹೆಸರು: ಎಕ್ಸಿಕ್ಯೂಟಿವ್ ಟ್ರೈನಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 15
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಇ, ಬಿ.ಟೆಕ್, ಬಿಎಸ್ಸಿ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 28 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.60 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಉಳಿದವರಿಗೆ 500 ರೂಪಾಯಿ ಶುಲ್ಕವಿದೆ. ಗೇಟ್ ಸ್ಕೋರ್, ಗ್ರೂಪ್ ಡಿಸ್ಕಷನ್ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ grid-india.in ಗೆ ಭೇಟಿ ನೀಡಿ
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಿಕೊಳ್ಳಬೇಕು
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು
ಇದನ್ನೂ ಓದಿ : ಪರೀಕ್ಷೆಯಲ್ಲಿ ಚಾಟ್‌ಜಿಪಿಟಿ ಬಳಸಿ ನಕಲು | ಸಿಕ್ಕಿಬಿದ್ದ IIT ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ.. ಭುಗಿಲೆದ್ದ ಪ್ರತಿಭಟನೆ!



















