ಬೆಳಗಾವಿ: ರಾಜ್ಯದಲ್ಲಿ ರೇಷನ್ ಕಾರ್ಡ್ ವಿಚಾರ ದೊಡ್ಡ ವಿವಾದಕ್ಕೆ ಕಾರಣವಾಗುತ್ತಿದೆ. ಅನರ್ಹರ ಕಾರ್ಡ್ ಗಳನ್ನು ಮಾತ್ರ ಬಿಪಿಎಲ್ ನಿಂದ ಎಪಿಎಲ್ ಮಾಡಲಾಗುತ್ತಿದೆ ಎಂದು ಸರ್ಕಾರ ಹೇಳಿದರೂ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಮಾತ್ರ ಆರೋಪ ಮಾಡುತ್ತಲೇ ಇವೆ. ಈ ಮಧ್ಯೆ ಕಾರ್ಡ್ ಬಂದಾದರೆ, ಗೃಹ ಲಕ್ಷ್ಮೀ ಹಣ ಬರಲ್ಲ ಎಂಬ ಸುದ್ದಿ ಹಬ್ಬಿತ್ತು. ಇದಕ್ಕೆ ಸ್ವತಃ ಸಚಿವರು ಸ್ಪಷ್ಟನೆ ನೀಡಿದ್ದಾರೆ.
ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಏನೇ ಇದ್ದರೂ ಗೃಹ ಲಕ್ಷ್ಮೀ ಹಣ ಬರುತ್ತದೆ. 80 ಸಾವಿರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವ ಬದಲು ಅವುಗಳನ್ನು ಎಪಿಎಲ್ ಆಗಿ ಬದಲಾಯಿಸಲಾಗುತ್ತಿದೆ. ಹೀಗಾಗಿ ಯಾರೂ ಗೊಂದಲಕ್ಕೆ ಒಳಗಾಗಬಾರದು ಎಂದಿದ್ದಾರೆ.
ಯಾವುದೇ ಕಾರಣಕ್ಕೂ ಸರ್ಕಾರ ಅರ್ಹರ ಕಾರ್ಡ್ ಗಳನ್ನು ರದ್ದು ಮಾಡುವುದಿಲ್ಲ. ಬದಲಾಗಿ ಅನರ್ಹರ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತಿದೆ ಎಂದಿದ್ದಾರೆ.