ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜೀನಾಮೆಗಾಗಿ ವಿಪಕ್ಷಗಳು ಆಗ್ರಹಿಸುತ್ತಿವೆ. ಈ ಮಧ್ಯೆ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರು ಉಲ್ಟಾ ಹೊಡೆದಿದ್ದಕ್ಕೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಕ್ಷದ ಹಲವರು ಮಾತನಾಡಿದ್ದಾರೆ.
ಜಿಡಿ ದೇವೇಗೌಡರ ಹೇಳಿಕೆಯಿಂದ ಎನ್ ಡಿಎ ನಾಯಕರು ಮುಜುಗರಕ್ಕೆ ಒಳಗಾಗಿದ್ದಾರೆ. ಜಿಟಿ ದೇವೇಗೌಡರ ಈ ಹೇಳಿಕೆಯಿಂದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಮುನಿಸಿಕೊಂಡಿದ್ದಾರೆ. ಹೀಗಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಜಿ.ಟಿ.ದೇವೇಗೌಡ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ನ ಹಾಲಿ ಮತ್ತು ಮಾಜಿ ಶಾಸಕರು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರಿಗೆ ಮನವಿ ಮಾಡಿದ್ದಾರೆ. ಜಿ.ಟಿ.ದೇವೇಗೌಡ ಅವರ ಹೇಳಿಕೆಯಿಂದ ಪಕ್ಷಕ್ಕೆ ಸಾಕಷ್ಟು ಡ್ಯಾಮೇಜ್ ಆಗಿದೆ. ಅವರ ಹೇಳಿಕೆಯಿಂದ ಎನ್ ಡಿಎ ತ್ರಿಕೂಟದ ಮುಡಾ ಹೋರಾಟಕ್ಕೆ ಹಿನ್ನಡೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಇದರಿಂದ ಮುಂಬರುವ ಚುನಾವಣೆಗಳಲ್ಲಿ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ಗೆ ದೊಡ್ಡ ಹೊಡೆತ ಬೀಳಲಿದೆ. ಜಿಟಿ ದೇವೇಗೌಡ ಅವರ ಹೇಳಿಕೆ ಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಸ್ತ್ರವಾಗಿ ಬಳಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಜಿಟಿಡಿ ಮಾತಿಗೆ ಬ್ರೇಕ್ ಹಾಕಬೇಕು ಎಂದು ಮನವಿ ಮಾಡಿದ್ದಾರೆ.