ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ನೀಡುವಾದಾಗಿ ಭರವಸೆ ನೀಡಿ ಅಧಿಕಾರದಗ ಗದ್ದುಗೆ ಏರಿತ್ತು. ಅದರಂತೆ ಗ್ಯಾರಂಟಿ ಯೋಜನೆಗಳನ್ನು (Congress Guarantee)ಜಾರಿಗೆ ತಂದಿತ್ತು. ಆದರೆ, ಈಗ ಗ್ಯಾರಂಟಿ ಯೋಜನೆಗೆ ನಿರಾಸಕ್ತಿ ಸಿಗುತ್ತಿದ್ದು, ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಅನ್ನಭಾಗ್ಯ (Anna Bhagya) ಮತ್ತು ಗೃಹಲಕ್ಷ್ಮಿ ಯೋಜನೆಯ (Gruhalakshmi) ಫಲಾನುಭವಿಗಳಿಗೆ ನೀಡುತ್ತಿದ್ದ ಹಣ ಸ್ಥಗಿತಗೊಂಡಿದೆ. ಅನ್ಯಭಾಗ್ಯದಡಿ ಬಿಪಿಎಲ್ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲಾಗಿ ನೀಡಲಾಗುತ್ತಿದ್ದ ಹಣ ಕಳೆದ 5 ತಿಂಗಳಿಂದಲೂ ಫಲಾನುಭವಿಗಳ ಖಾತೆ ಸೇರುತ್ತಿಲ್ಲ. ಗೃಹಲಕ್ಷ್ಮಿ ಹಣ 3 ತಿಂಗಳಿನಿಂದ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ.
ಕೇಂದ್ರ ಸರ್ಕಾರದ 5 ಕೆಜಿ ಅಕ್ಕಿ ಜೊತೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ನೀಡುವುದಾಗಿ ಆರಂಭದಲ್ಲಿ ಘೋಷಿಸಲಾಗಿತ್ತು. ಆದರೆ, ಕೇಂದ್ರದಿಂದ ಸರಿಯಾದ ಸ್ಪಂದನೆ ಸಿಗಲಿಲ್ಲ. ಹೀಗಾಗಿ 5 ಕೆಜಿ ಅಕ್ಕಿಯ ಬದಲಾಗಿ ಹಣ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು.
ಅದರಂತೆ ಸರ್ಕಾರ ಒಂದು ಕೆಜಿ ಅಕ್ಕಿಗೆ 34 ರೂ. ಪಾವತಿ ಮಾಡಬೇಕಿತ್ತು. ಒಂದು ಪಡಿತರ ಕುಟುಂಬದಲ್ಲಿ ಐವರು ಸದಸ್ಯರಿದ್ದರೆ 20 ಕೆಜಿಗೆ ಅಕ್ಕಿಗೆ ಪ್ರತಿ ತಿಂಗಳು 850 ರೂ. ಜಮೆ ಮಾಡಲಾಗುತ್ತಿತ್ತು. ಆದರೆ, ಕಳೆದ 5 ತಿಂಗಳಿಂದ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತಿಲ್ಲ ಎಂದು ಜನರು ಆರೋಪಿಸಿದ್ದಾರೆ.
ಇನ್ನೊಂದು ಯೋಜನೆಯಾಗಿರುವ ಗೃಹಲಕ್ಷ್ಮೀ ಯೋಜನೆಯ ಹಣ ಕೂಡ ಮಹಿಳೆಯರಿಗೆ ತಲುಪುತ್ತಿಲ್ಲ. ಕುಟುಂಬದ ಯಜಮಾನಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಹಣ ಕಳೆದ ಮೂರು ತಿಂಗಳಿಂದ ಮಹಿಳೆಯರನ್ನು ತಲುಪಿಲ್ಲ. ಹೀಗಾಗಿ ಮಹಿಳೆಯರು ಕೂಡ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.