ಬೈಂದೂರು: ಜಿಲ್ಲೆಯ ಕುಂದಾಪುರ ತಾಲೂಕಿನ ಕ್ಷೇತ್ರ ಗುಡ್ಡಮ್ಮಾಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಕಾರ್ಯಕ್ರಮ ನಡೆಯಿತು.
ಈ ವೇಳೆ ನಾನಾ ಧಾರ್ಮಿಕ ವಿಧಿವಿಧಾನಗಳು ವಿಜೃಂಭಣೆಯಿಂದ ನಡೆದವು. ಷಷ್ಠಿ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಸಂತಾನ ಕಾರಕನಾದ ಸುಬ್ರಹ್ಮಣ್ಯ ದೇವರಿಗೆ ಹೂವಿನ ಅಲಂಕಾರ ಪೂಜೆ, ಕಲಶಾಭಿಷೇಕ, ಸಂಹಿತಾ ಪಾರಾಯಣ, ಹಣ್ಣು ಕಾಯಿ, ಮಂಗಳಾರತಿ, ಹರಿವಾಣ ನೈವೇದ್ಯ ಸೇವೆ, ಮಡೆ ಪ್ರದಕ್ಷಿಣೆ, ನಾಗ ದರ್ಶನ, ಸಾರ್ವಜನಿಕ ಪ್ರಸಾದ ವಿತರಣೆ ಕಾರ್ಯಕ್ರಮಗಳು ನಡೆದವು.
ಈ ವೇಳೆ ಕುಂದಾಪುರ, ಬೈಂದೂರು ತಾಲೂಕಿನ ಹಾಗೂ ಘಟ್ಟ ಪ್ರದೇಶದಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.