ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಅಧ್ಯಾಪರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹಲವು ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಜೂನ್ 30ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಜುಲೈ 8 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ವಿದ್ಯಾರ್ಹತೆ ಏನು?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ಪಿಎಚ್.ಡಿ ಪೂರ್ಣಗೊಳಿಸಿರಬೇಕು. ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ ಎಂದು ಬೆಂಗಳೂರು ವಿವಿ ಅಧಿಸೂಚನೆಯಲ್ಲಿ ತಿಳಿಸಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲು ಬೆಂಗಳೂರು ವಿವಿಯ https://bangaloreuniversity.karnataka.gov.in/ ವೆಬ್ ಸೈಟಿಗೆ ಭೇಟಿ ನೀಡಬೇಕು.
- ಅಲ್ಲಿ ಅತಿಥಿ ಅಧ್ಯಾಪರ ಹುದ್ದೆಯ ನೇಮಕಾತಿ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು
- ಅಧಿಸೂಚನೆಯಲ್ಲಿ ಪ್ರಸ್ತಾಪಿಸಿದ ದಾಖಲೆಗಳ ಕುರಿತು ಮಾಹಿತಿ ಪಡೆಯಬೇಕು.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಭರ್ತಿ ಮಾಡಿದ ಅರ್ಜಿಯ ಜತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಜುಲೈ 8ರೊಳಗೆ ಕಳುಹಿಸಬೇಕು.
ಅರ್ಜಿ ಕಳುಹಿಸುವ ವಿಳಾಸ
The Respective Principal/Chairpersons/Co-ordinators of the under the faculties of Law, Arts, Science, and Commerce Bangalore University, Jnana Bharathi Campus Bengaluru-560056.