ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೇಸಿಗೆಯಿಂದ ಬಳಲಿದ್ದ ಜನರಿಗೆ ಮಳೆರಾಯ ತಂಪು ನೀಡಿದ್ದಾನೆ.
ರಾಜ್ಯದ ಜನರು ಬಿಸಿಲಿನಿಂದ ಬಳಲುತ್ತಿದ್ದರು. ಈ ಮಧ್ಯೆ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇಂದು ದಿಢೀರ್ ಮಳೆ (Rain) ಬಂದಿದೆ. ಬೆಂಗಳೂರಿನ ಸಂಜಯನಗರ, ಭೂಪಸಂದ್ರ, ಹೆಬ್ಬಾಳ ಮತ್ತು ಮೇಖ್ರಿ ಸರ್ಕಲ್, ಯಲಹಂಕ, ಹೆಬ್ಬಾಳ್, ಯಶವಂತಪುರ, ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ ಆಗಿದೆ. ಹೀಗಾಗಿ ವಾಹನ ಸವಾರರು ಹಾಗೂ ಸಾರ್ವಜನಿಕರು ಮಳೆಯಲ್ಲಿ ಸಿಲುಕಿ, ಪರದಾಡುವಂತಾಗಿತ್ತು.
ದೇವನಹಳ್ಳಿ ಸುತ್ತಮುತ್ತ ಗುಡುಗು ಸಹಿತ ಮಳೆ
ಹಲವು ಜಿಲ್ಲೆಗಳಲ್ಲಿ ರಣ ಬಿಸಿಲಿನ ವಾತಾವರಣ ಇದೆ. ಈ ಮಧ್ಯೆ ಹಲವು ಜಿಲ್ಲೆಗಳಲ್ಲಿ ವರ್ಷದ ಮೊದಲ ಮಳೆ ಆಗುತ್ತಿದೆ. ಬೆಂಗಳೂರು ಹೊರವಲಯದಲ್ಲೂ ಮಳೆಯಾಗಿದೆ. ಅರ್ಧಗಂಟೆ ಸುರಿದ ಮಳೆಗೆ ವಾತಾವರಣ ಫುಲ್ ಕೂಲ್ ಆಗಿದೆ. ವರ್ಷದ ಮೊದಲ ಮಳೆ ಕಂಡು ಜನರು ಸಂತಸಗೊಂಡರು.
ಕೋಲಾರ, ಹಾಸನ, ಕರಾವಳಿಯ ಹಲವು ಜಿಲ್ಲೆಗಳಲ್ಲಿ ದಿಢೀರ್ ಎಂದು ಮಳೆ ಸುರಿದಿದೆ. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಗಿತ್ತು.