ಬೆಂಗಳೂರು: ಕೇಂದ್ರ ಸರ್ಕಾರದ ಹುದ್ದೆ ಹುಡುತ್ತಿರುವವರಿಗೆ, ಅದರಲ್ಲೂ ಬೆಂಗಳೂರಿನಲ್ಲಿಯೇ ವೃತ್ತಿಜೀವನ ಆರಂಭಿಸಬೇಕು ಎನ್ನುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ (HAL India Recruitment 2026) ಖಾಲಿ ಇರುವ 1 ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ನ್ಯೂರೋಸೈನ್ಸ್ ಟೆಕ್ನಿಶಿಯನ್ ಹುದ್ದೆಯ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
ಹುದ್ದೆ ಹೆಸರು: ನ್ಯೂರೋಸೈನ್ಸ್ ಟೆಕ್ನಿಶಿಯನ್
ಒಟ್ಟು ಹುದ್ದೆ: 01
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 21
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ, ಬಿಎಸ್ಸಿ ಹಾಗೂ ಎಂಎಸ್ಸಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ hal-india.co.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
Dy. General Manager(HR), Industrial Health Center, Hindustan Aeronautics Limited, Suranjandas Road, (Near Old Airport), Bangalore-560 017
ಇದನ್ನೂ ಓದಿ: ಉಳಿತಾಯ ಖಾತೆಗಳ ಮೇಲಿನ ಬಡ್ಡಿ ಪರಿಷ್ಕರಿಸಿದೆ ಈ ಬ್ಯಾಂಕ್ : ಹೊಸ ಬಡ್ಡಿದರ ತಿಳಿಯಿರಿ


















