ಬೆಂಗಳೂರು : ನೀವೇನಾದರೂ ಎಂಬಿಬಿಎಸ್ ಮುಗಿಸಿ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಎಚ್ಎಎಲ್ ಇಂಡಿಯಾ ಸಂಸ್ಥೆಯಲ್ಲಿ (HAL India Recruitment 2026) ಖಾಲಿ ಇರುವ 1 ವಿಸಿಟಿಂಗ್ ಕನ್ಸಲ್ಟಂಟ್ ಹುದ್ದೆಯನ್ನು (ನ್ಯೂರೋ ಸರ್ಜನ್) ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಎಚ್ಎಎಲ್ ಇಂಡಿಯಾ
ಒಟ್ಟು ಹುದ್ದೆಗಳು: 1
ಹುದ್ದೆಗಳ ಹೆಸರು: ವಿಸಿಟಿಂಗ್ ಕನ್ಸಲ್ಟಂಟ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 30
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಬಿಬಿಎಸ್, ಎಂಎಸ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಎರಡು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇದಾದ ಬಳಿಕ ಅವಧಿ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಅರ್ಜಿ ಸಲ್ಲಿಸುವವರಿಗೆ 65 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ hal-india.co.in ಗೆ ಭೇಟಿ ನೀಡಿ
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಿ
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಿ
ಅರ್ಜಿ ಹಾಗೂ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
ಅರ್ಜಿ ಸಲ್ಲಿಸಬೇಕಾದ ವಿಳಾಸ
To Dy. General Manager(HR), Industrial Health Center, Hindustan Aeronautics Limited (Bangalore Complex), Suranjandas Road, (Near Old Airport), Bangalore-560017.
ಇದನ್ನೂ ಓದಿ : ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್ ಅಯ್ಯರ್ ನಡೆಗೆ ಮೆಚ್ಚುಗೆ



















