ಬೆಂಗಳೂರು: ಕೇಂದ್ರ ಸರ್ಕಾರದ ಮಹಾರತ್ನ ಕಂಪನಿಗಳಲ್ಲಿ ಒಂದಾಗಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ (HAL India Recruitment 2026) ಖಾಲಿ ಇರುವ 150 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 150 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ವಿವರ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
ಹುದ್ದೆ ಹೆಸರು: ಜೂನಿಯರ್ ಎಕ್ಸಿಕ್ಯೂಟಿವ್
ಒಟ್ಟು ಹುದ್ದೆ: 150
ಉದ್ಯೋಗ ಸ್ಥಳ: ಬೆಂಗಳೂರು ಸೇರಿ ಹಲವೆಡೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 17
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಕರ್ನಾಟಕದ ಬೆಂಗಳೂರು, ತುಮಕೂರಿನಲ್ಲಿ ನೇಮಕಾತಿ ನಡೆಯುತ್ತಿದೆ. ಉಳಿದಂತೆ ತೆಲಂಗಾಣದ ಹೈದರಾಬಾದ್, ಮಹಾರಾಷ್ಟ್ರದ ನಾಶಿಕ್, ಉತ್ತರ ಪ್ರದೇಶದ ಕಾನ್ಪುರ ಸೇರಿ ದೇಶದ ಹಲವೆಡೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಏರೋನಾಟಿಕಲ್, ಕೆಮಿಕಲ್, ಸಿವಿಲ್, ಕಂಪ್ಯೂಟರ್ ಸೈನ್ಸ್ ಸೇರಿ ಹಲವು ವಿಭಾಗಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 28 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.2 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ hal-india.co.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಂಡಿರಬೇಕು.
ಇದನ್ನೂ ಓದಿ :ಇಸ್ರೇಲ್‌ನಿಂದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ನಾಗರಿಕ ಶೌರ್ಯ ಪ್ರಶಸ್ತಿ ಘೋಷಣೆ


















