ಬೆಂಗಳೂರು : ನೀವೇನಾದರೂ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ ಮುಗಿಸಿದ್ದೀರಾ? ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಹೌದು, ಕೇಂದ್ರ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ (HAL India Recruitment 2026) ಖಾಲಿ ಇರುವ 151 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
ಹುದ್ದೆ ಹೆಸರು: ಫೈರ್ ಮ್ಯಾನ್, ಡಿಪ್ಲೋಮಾ ಟೆಕ್ನಿಶಿಯನ್ ಇತ್ಯಾದಿ
ಒಟ್ಟು ಹುದ್ದೆ: 151
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 25
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 23 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಿನಾಯಿತಿ ಇದ್ದರೆ, ಒಬಿಸಿಯವರಿಗೆ 3 ವರ್ಷಗಳ ವಿನಾಯಿತಿ ಇದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು hal-india.co.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ : ಫಿಲ್ಮ್ ಚೇಂಬರ್‌ನಲ್ಲೇ ಹೃದಯಾಘಾತ.. 100ಕ್ಕೂ ಹೆಚ್ಚು ಚಿತ್ರಗಳಿಗೆ ಜೀವ ತುಂಬಿದ್ದ ನಿರ್ದೇಶಕ ಜೋ ಸೈಮನ್ ನಿಧನ



















