ಬೆಂಗಳೂರಿನ ಹೊರವಲಯದಲ್ಲಿ ಮತ್ತೊಮ್ಮೆ ಲಾಂಗ್, ಮಚ್ಚು ಝಳಪಿಸಿರುವ ಘಟನೆ ಬೆಳಕಿಗೆ ಬಂದಿದೆ.
ನಗರದ ಹೊರವಲಯದಲ್ಲಿನ ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬನ ಮೇಲೆ ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಗರದ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಹೋಟೆಲ್ ಒಂದರಲ್ಲಿ ಊಟ ಮಾಡುತ್ತಿದ್ದ ಮಂಜು ಎಂಬಾತನ ಮೇಲೆ ಗ್ಯಾಂಗ್ ಮನಬಂದಂತೆ ಹಲ್ಲೆ ನಡೆಸಿದೆ. ಲಾಂಗ್, ಮಚ್ಚುಗಳಿಂದ ಹಲ್ಲೆ ನಡೆಸಲಾಗಿದೆ. ಘಟನೆಯಲ್ಲಿ ಮಂಜು ಕೈ ಕತ್ತರಿಸಿದ್ದಾರೆ. ಮನಬಂದಂತೆ ದೇಹದ ಮೇಲೆ ಲಾಂಗ್, ಮಚ್ಚುಗಳಿಂದ ದಾಳಿ ನಡೆಸಿದ್ದಾರೆ. ಸದ್ಯ ಮಂಜು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು- ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಆರೋಪಿಗಳು ಈ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.