ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹೆಸರು ಪ್ರಸ್ತಾಪವಾಗಿರುವ ಬೆನ್ನಲ್ಲೇ, ಪ್ರಕರಣದ ತನಿಖೆ ವಿಚಾರವಾಗಿ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಪೊಲೀಸ್ ಆಯುಕ್ತರು ನೀಡಿರುವ ಹೇಳಿಕೆಗಳು ಉತ್ಪ್ರೇಕ್ಷೆಯಾಗಬಾರದು. ಸ್ಟಿಂಗ್ ಆಪರೇಷನ್ ಮಾಡಿದ್ದು ಯಾರು? ಎಲ್ಲಿ ಮಾಡಲಾಗಿದೆ? ಯಾಕೆ ಮಾಡಲಾಗಿದೆ? ಇದರ ಹಿಂದಿರುವ ಮೂಲ ವ್ಯಕ್ತಿ ಯಾರು ಎಂಬುದನ್ನು ಮೊದಲು ಪತ್ತೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಕಳೆದ 15 ದಿನಗಳಿಂದ ರಾಜ್ಯ ಸರ್ಕಾರ ಈ ವಿಚಾರದಲ್ಲಿ ಯಾಕೆ ಸುಮ್ಮನಿತ್ತು ಎಂದು ಪ್ರಶ್ನಿಸಿದ ಆರ್. ಅಶೋಕ್, ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.


















