ಹುಬ್ಬಳ್ಳಿ: ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಇಲ್ಲಿನ ಕೃಷ್ಣಾಪುರ ಓಣಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯು ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ.
ಮಹಿಜಬೀನ್ ಸಾಧಿಕ್ ಬಂಕಾಪುರ ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ. ಪತಿ ಸಾಧಿಕ್ ಬಂಕಾಪುರ್ ಕಿರುಕುಳ ನೀಡುತ್ತಿದ್ದರಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಸಾಧಿಕ್ ಹಾವೇರಿ ಜಿಲ್ಲೆಯ ಬಂಕಾಪುರ ನಿವಾಸಿ. ಮಹಿಜಬೀನ್ ಳನ್ನು ಪ್ರೀತಿಸಿ ಮದುವೆಯಾಗಿದ್ದ. ಮದುವೆ ನಂತರ ವರದಕ್ಷಿಣೆಗಾಗಿ ಪೀಡಿಸುತ್ತಿದ್ದನೆಂಬ ಆರೋಪ ಕೇಳಿ ಬಂದಿದೆ. ಪತಿ ಮತ್ತು ಮನೆಯವರು ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಿದ್ದಾರೆ. ತವರು ಮನೆಯಲ್ಲಿ ಮಹಿಜಬೀನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.