ಬೆಂಗಳೂರು : ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರಪೇಟೆಯಲ್ಲಿರುವ ಹಾರ್ಡ್‌ವೇರ್ ಶಾಪ್‌ಗೆ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಇಂದು ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಹಾರ್ಡ್‌ವೇರ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ ಎಂಬ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ದಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಅದೃಷ್ಟಾವಶಾತ್ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಸ್ಥಳೀಯ ಪೊಲೀಸರು ಸುರಕ್ಷತೆ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : 130 ಕೋಟಿಗೂ ಅಧಿಕ ಆಸ್ತಿ.. ವಿಜಯ್-ರಶ್ಮಿಕಾ ಜೋಡಿಯ ಐಷಾರಾಮಿ ಜೀವನದ ಇಣುಕುನೋಟ



















