ಚಂದನವನದ (Sandalwood) ನಟಿ ಹರ್ಷಿಕಾ ಪೂಣಚ್ಚ (Harshika Poonacha) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಹರ್ಷಿಕಾ ಪೂಣಚ್ಚ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಕುರಿತು ಅವರ ಪತಿ ಭುವನ್ ಪೊನ್ನಣ್ಣ (Bhuvann Ponnanna) ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಶುಕ್ರವಾರ ಬೆಳಿಗ್ಗೆ 3ಕ್ಕೆ ಹರ್ಷಿಕಾ ಹಾಗೂ ಭುವನ್ ಪೊನ್ನಣ್ಣ ಜೋಡಿ ಹೆಣ್ಣು ಮಗುವಿನ ಆಗಮನವಾಗಿದೆ. ಹರ್ಷಿಕಾ ಹಾಗೂ ಭುವನ್ ಕುಟುಂಬಸ್ಥರು ಹೆಣ್ಣು ಮಗುವಿನ ಆಗಮನದಿಂದ ಸಂತಸಗೊಂಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹರ್ಷಿಕಾ ಜನ್ಮ ನೀಡಿದ್ದಾರೆ ಎಂದು ಪತಿ ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೊನ್ನಣ್ಣ, ಎಲ್ಲರಿಗೂ ನಮಸ್ಕಾರ, ನಮ್ಮ “ಚೈಕಾರ್ತಿ ಮೂಡಿ” ಜನಿಸಿದ್ದನ್ನು ತಿಳಿಸಲು ಸಂತೋಷ ಪಡುತ್ತಿದ್ದೇವೆ. ಹರ್ಷಿ ಮತ್ತು ಮಗಳು ಆರೋಗ್ಯವಾಗಿದ್ದಾರೆ. ಮಗಳು ಹರ್ಷಿಕಾಳಂತೆ ಇದ್ದಾರೆ. ಅವಳ ಪ್ರಕಾರ ಮಗು ನನ್ನ ಕಾಪಿ ಎನ್ನುತ್ತಿದ್ದಾಳೆ. ಎಲ್ಲರಿಗೂ ಧನ್ಯವಾದ ಎಂದು ಬರೆದಿದ್ದಾರೆ.