ಹರ್ಯಾಣ, ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ.
ಹರಿಯಾಣದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವ ತವಕದಲ್ಲಿದ್ದರೆ, ಕಾಂಗ್ರೆಸ್ ಮ್ಯಾಜಿಕ್ ಮಾಡಲು ಮುಂದಾಗಿದೆ. ಚುನಾವಣೆಯಲ್ಲಿ ಪ್ರಮುಖ ಪಕ್ಷಗಳು ಬಿಜೆಪಿ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (ಎಎಪಿ), ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ)-ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ)-ಆಜಾದ್ ಸಮಾಜ ಪಕ್ಷ (ಎಎಸ್‌ಪಿ). ಬಹುತೇಕ ಕ್ಷೇತ್ರಗಳಲ್ಲಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ಫೈಟ್ ಇದೆ.
ಜಮ್ಮು-ಕಾಶ್ಮೀರದಲ್ಲಿ 90 ವಿಧಾನಸಭಾ ಸ್ಥಾನಗಳಿಗೆ ಮೂರು ಹಂತಗಳಲ್ಲಿ ಮತದಾನವಾಗಿದೆ. 2019 ರಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಚುನಾಯಿತ ಸರ್ಕಾರ ರಚನೆಗೆ ದಾರಿ ಸುಗಮವಾಗಲಿದೆ.
ಹಿಂದಿನ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ಐದು ವರ್ಷಗಳ ನಂತರ ಈ ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ (NC) ಮೈತ್ರಿ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP) ಮತ್ತು ಭಾರತೀಯ ಜನತಾ ಪಕ್ಷ (BJP). ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ 90 ವಿಧಾನಸಭಾ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 873 ಅಭ್ಯರ್ಥಿಗಳು ಕಣದಲ್ಲಿದ್ದರು. ಇಂದು ಮತ ಎಣಿಕೆಯ ನಂತರ ಫಲಿತಾಂಶದ ತಕ್ಷಣ ಅವರ ಭವಿಷ್ಯ ನಿರ್ಧಾರವಾಗಲಿದೆ. ಜಮ್ಮು ಮತ್ತು ಕಾಶ್ಮೀರದ 20 ಜಿಲ್ಲೆಗಳಲ್ಲಿ ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇಲ್ಲಿ 700 ವೀಕ್ಷಕರನ್ನು ಸಹ ನಿಯೋಜಿಸಲಾಗಿದೆ. 10 ಸಾವಿರಕ್ಕೂ ಅಧಿಕ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆಯ ಚುನಾವಣಾ ಮತ ಎಣಿಕೆ ಇಂದು ನಡೆಯಲಿದ್ದು, ಮಧ್ಯಾಹ್ನದ ಸಂದರ್ಭದಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ.